ಪನ್ವೇಲ್ನಲ್ಲಿ ಕನ್ನಡ ಕಲಿಕಾ ಕೇಂದ್ರ ಆರಂಭ
ಮುಂಬಯಿ: ಮುಂಬೈನ ಹೊರವಲಯದ ಪ್ರಮುಖ ನಗರಗಳಲ್ಲಿ ಒಂದಾದ ಪನ್ವೇಲ್ ಕರ್ನಾಟಕ ಸಂಘದಲ್ಲಿ ವಿಶ್ವವಿದ್ಯಾಲಯದ ಕನ್ನಡ ಕಲಿಕಾ ಕೇಂದ್ರವನ್ನು ಕನ್ನಡ ವಿಭಾಗದ ಮುಖ್ಯಸ್ಥ ಡಾ. ಜಿ.ಎನ್. ಉಪಾಧ್ಯ ಇತ್ತೀಚೆಗೆ ಉದ್ಘಾಟಿಸಿದರು.
ಕರ್ನಾಟಕದ ರಾಜಧಾನಿ ಬೆಂಗಳೂರನ್ನು ಬಿಟ್ಟರೆ ಅತಿ ಹೆಚ್ಚು ಕನ್ನಡಿಗರಿರುವ ಪ್ರದೇಶ ಮುಂಬೈ. ಸುಮಾರು 20 ಲಕ್ಷ ಕನ್ನಡಿಗರು ನೆಲೆಸಿದ್ದು ನೂರಾರು ಕನ್ನಡ ಸಂಘ ಸಂಸ್ಥೆಗಳನ್ನು ಸ್ಥಾಪಿಸಿ ಕನ್ನಡದ ತೇರೆಳೆಯುವ ಕಾಯಕವನ್ನು ಸಕ್ರಿಯವಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಮುಂಬೈ ವಿವಿ ಕನ್ನಡ ಸರ್ಟಿಫಿಕೇಟ್ ಕೋರ್ಸ್ ಇದೀಗ ಪನ್ವೇಲ್ ಕರ್ನಾಟಕ ಸಂಘದಲ್ಲಿ ಆರಂಭಗೊಂಡಿದೆ. ಇದರ ಸದುಪಯೋಗವನ್ನು ಕನ್ನಡಿಗರು, ಕನ್ನಡೇತರರು ಬಳಸಿಕೊಳ್ಳಬೇಕು. ಕನ್ನಡವನ್ನು ರಾಷ್ಟ್ರ ಮಟ್ಟದಲ್ಲಿ ಬೆಳೆಸಿಕೊಳ್ಳಬೇಕಾದ ಅಗತ್ಯವನ್ನು ಡಾ. ಜಿ.ಎನ್. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಒತ್ತಿ ಹೇಳಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಸಾಹಿತಿ, ಕವಿ, ಕಥೆಗಾರ ಶ್ರೀನಿವಾಸ ಜೋಕಟ್ಟೆ, ಇನ್ನೊಬ್ಬ ಅತಿಥಿ ಮಹಾರಾಷ್ಟ್ರ ರಾಜ್ಯದ ಪಠ್ಯಪುಸ್ತಕ ಮಂಡಳಿ ಪುಣೆ ಇದರ ಸಹಾಯಕ ಅಧಿಕಾರಿ ರೇವಯ್ಯ ಗಣಾಚಾರಿ ಹಾಗೂ ಪನ್ವೇಲ್ ಕರ್ನಾಟಕ ಸಂಘದ ಅಧ್ಯಕ್ಷ ಮಂಜುನಾಥ ಗೌಡ ಮಾತನಾಡಿದರು.
ಕನ್ನಡ ಕಲಿಕಾ ಕೇಂದ್ರದ ಸಂಚಾಲಕಿ ವಿದುಷಿ ಶ್ಯಾಮಲಾ ಪ್ರಕಾಶ್ ಅವರು ಗಮಕ ಕಲೆಯ ಅನನ್ಯತೆಯನ್ನು ಸೋದಾಹರಣವಾಗಿ ವಿವರಿಸಿ ಕುಮಾರವ್ಯಾಸ ಭಾರತದ ಕೆಲವು ಪದ್ಯಗಳನ್ನು ಸ್ವಾರಸ್ಯ ಪೂರ್ಣವಾಗಿ ಸಾದರ ಪಡಿಸಿದರು. ಪನ್ವೇಲ್ ನಗರಸಭೆಯ ನಗರಸೇವಕ, ಯುವಮುಂದಾಳು ಸಂತೋಷ್ ಶೆಟ್ಟಿ ಅವರು ಅತಿಥಿಗಳನ್ನು ಶಾಲು ಹೊದಿಸಿ ಗೌರವಿಸಿದರು. ಗೀತಾ ದಿವಾಕರ ಶೆಟ್ಟಿ ಪ್ರಾರ್ಥಿಸಿದರು. ಕಾರ್ಯದರ್ಶಿ ಅರುಣ ಶೆಟ್ಟಿ ಹಾಗೂ ಉಮಾಶೆಟ್ಟಿ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಮಂಜುನಾಥ ಗೌಡ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

