ಜೂ.8ರಿಂದ ಕಯ್ಯಾರ ಕಿಞಣ್ಣರೈ ಶತಮಾನೋತ್ಸವ ವರ್ಷಾಚರಣೆಯ ಕಾರ್ಯಕ್ರಮ
ಕಾಸರಗೋಡು: ನಾಡೋಜ ಡಾ. ಕಯ್ಯಾರ ಕಿಞಣ್ಣರೈ -100 ಜನ್ಮಶತಮಾನೋತ್ಸವ ವರ್ಷಾಚರಣೆಯ 100 ಸರಣಿ ಕಾರ್ಯಕ್ರಮಗಳನ್ನು ಅಖಿಲ ಭಾರತ ಮಟ್ಟದಲ್ಲಿ ಹಮ್ಮಿಕೊಳ್ಳಲು ರೂಪುರೇಷೆಯನ್ನು ಸಿದ್ಧಪಡಿಸಲಾಗಿದೆ. ಜೂ.8ರಿಂದ ಜನ್ಮಶತಮಾನೋತ್ಸವ ವರ್ಷಾಚರಣೆಯ ಪ್ರಯುಕ್ತ 100 ಸರಣಿ ಕಾರ್ಯಕ್ರಮಗಳನ್ನು ದೇಶದ ಬೇರೆ ರಾಜ್ಯದಲ್ಲಿರುವ ವಿಶ್ವವಿದ್ಯಾನಿಲಯದ ಕನ್ನಡ, ತುಳುವಿಭಾಗ, ಶಾಲಾ ಕಾಲೇಜುಗಳಲ್ಲಿ ಸಾಹಿತ್ಯೋತ್ಸವ ಸರಣಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಜನ್ಮಶತಮಾನೋತ್ಸವ ನೆನಪಿಗಾಗಿ ಸಂಗ್ರಾಹ್ಯ ಸ್ಮರಣ ಸಂಚಿಕೆಯನ್ನು ಪ್ರಕಟಿಸಲು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ನಿರ್ಧರಿಸಿದೆ. ಕಾರ್ಯಕ್ರಮಗಳನ್ನು ಕಾಸರಗೋಡು ಬದಿಯಡ್ಕ ಕವಿತಾ ಕುಟೀರದಲ್ಲಿ 100ನೇ ವರ್ಷದ ಹುಟ್ಟು ಹಬ್ಬವನ್ನು 8 ಜೂನ್ರಂದು ಬೆ. 10ರಿಂದ ಸಂಜೆ 5 ಗಂಟೆ ತನಕ ಏರ್ಪಡಿಸಲಾಗಿದೆ ಎಂದು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು (ಮೊ. 944 8572016) ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

