ಸಿಎಂ ಬೊಮ್ಮಾಯಿ
ಸುದ್ದಿಗಳು
ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಸ್ಥಿರ ಸರ್ಕಾರ ರಚನೆ ಮಾಡಲಿದೆ: ಸಿಎಂ ಬೊಮ್ಮಾಯಿ ವಿಶ್ವಾಸ
ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಈ ಬಾರಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಸ್ಥಿರ ಸರ್ಕಾರ ರಚನೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದ್ದಾರೆ.
ಬೆಂಗಳೂರು: ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಈ ಬಾರಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಸ್ಥಿರ ಸರ್ಕಾರ ರಚನೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತೆಯ ತೀರ್ಪು ಹೊರಬೀಳಲಿರುವ ಕರ್ನಾಟಕಕ್ಕೆ ಇಂದು ಮಹತ್ವದ ದಿನ, ಬಾರಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಸ್ಥಿರ ಸರ್ಕಾರ ರಚನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಾಂತಿಯುತವಾಗಿ ಮತದಾನ ಮಾಡಿದ ಜನತೆಗೆ ಧನ್ಯವಾದಗಳು. ರಾಜಕೀಯ ಪಕ್ಷಗಳೂ ಕೂಡ ಮತಎಣಿಕೆ ಸುಗಮವಾಗಿ ನಡೆಯಲು ಬಿಡಬೇಕು ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ