ಕಾಂಗ್ರೆಸ್- ಬಿಜೆಪಿ ನಡುವೆ ಪೈಪೋಟಿ; ಹುಬ್ಬಳ್ಳಿ-ಧಾರವಾಡ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್‌ಗೆ ಆರಂಭಿಕ ಹಿನ್ನಡೆ

ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದ್ದು, ಮತಎಣಿಕೆಯ ಆರಂಭಿಕ ಪ್ರಕ್ರಿಯೆಯಲ್ಲಿ ರಾಜ್ಯದಾದ್ಯಂತ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಜೆಡಿಎಸ್ ಕೂಡ 10 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದ್ದು, ಮತಎಣಿಕೆಯ ಆರಂಭಿಕ ಪ್ರಕ್ರಿಯೆಯಲ್ಲಿ ರಾಜ್ಯದಾದ್ಯಂತ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಜೆಡಿಎಸ್ ಕೂಡ 10 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಆರಂಭಿಕ ಟ್ರೆಂಡ್‌ಗಳು ಲಭ್ಯವಿವೆ. ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ತಲಾ 70ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಹಾಗೂ ವಸತಿ ಸಚಿವ ವಿ. ಸೋಮಣ್ಣ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ಗೆ ಹಿನ್ನೆಡೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿಗಿಂತ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿಯ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರಂಭಿಕ ಹಂತದಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

ಶಿವಮೊಗ್ಗ ಕ್ಷೇತ್ರದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಟಿಕೆಟ್ ನಿರಾಕರಿಸಲಾಗಿದ್ದು, ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಮುನ್ನಡೆ ಸಾಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com