ರಾಜ್ಯ ವಿಧಾನಸಭೆ ಚುನಾವಣೆ 2023; ಕನಕಪುರದಲ್ಲಿ ಡಿಕೆಶಿ ಭರ್ಜರಿ ಓಟ; 11,500 ಮತಗಳಿಂದ ಮುನ್ನಡೆ

ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಆರಂಭಿಕ ಮತಎಣಿಕೆ ಪ್ರಕ್ರಿಯೆಯಲ್ಲಿ ಕನಕಪುರದಲ್ಲಿ ಡಿಕೆ.ಶಿವಕುಮಾರ್ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಆರಂಭಿಕ ಮತಎಣಿಕೆ ಪ್ರಕ್ರಿಯೆಯಲ್ಲಿ ಕನಕಪುರದಲ್ಲಿ ಡಿಕೆ.ಶಿವಕುಮಾರ್ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.

ರಾಮನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನಕಪುರ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಆರ್.ಅಶೋಕ್​ಗಿಂತ 11,500 ಮತಗಳಿಂದ ಡಿಕೆ.ಶಿವಕುಮಾರ್ ಅವರು ಮುನ್ನಡೆ ಸಾಧಿಸಿದ್ದಾರೆ.

ಸತತ 7 ಗೆಲುವು ಸಾಧಿಸಿರುವ ಡಿ.ಕೆ.ಶಿವಕುಮಾರ್ ಸೋಲಿಸಲು ಬಿಜೆಪಿ ರಾಷ್ಟ್ರೀಯ ನಾಯಕರು ಶಪಥ ಮಾಡಿದಂತೆ ಈ ಚುನಾವಣೆ ಭಾಸವಾಗಿತ್ತು.

ಆರ್.ಅಶೋಕ್ ಪದ್ಮನಾಭನಗರ ಕ್ಷೇತ್ರದ ಜತೆ ಕನಕಪುರ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಿದ್ದರು. ಮೇ 10ರಂದು ರಾಮನಗರ ಜಿಲ್ಲೆಯಲ್ಲಿ ಶೇ.85ರಷ್ಟು ಮತದಾನವಾಗಿತ್ತು. ಈ ಪೈಕಿ ಕನಕಪುರ ಕ್ಷೇತ್ರದಲ್ಲಿ ಶೇ.84.52ರಷ್ಟು ವೋಟಿಂಗ್ ನಡೆದಿದ್ದು, ಅಭ್ಯರ್ಥಿಗಳ ಹಣೆಬರಹ ಇನ್ನೇನು ನಿರ್ಧಾರವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com