ಕಾಂಗ್ರೆಸ್‌ನ '40 ಪರ್ಸೆಂಟ್ ಸರ್ಕಾರ' ಘೋಷಣೆಯನ್ನು ಜನರು ಒಪ್ಪಿಕೊಂಡಿದ್ದಾರೆ: ಸಚಿನ್ ಪೈಲಟ್

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಬಿರುಸಿನಿಂದ ಸಾಗುತ್ತಿದ್ದು, ಕಾಂಗ್ರೆಸ್ ಪಕ್ಷ ಎಲ್ಲೆಡೆ ಉತ್ತಮ ಮುನ್ನಡೆ ಕಾಯ್ದುಕೊಂಡಿದೆ. ಆರಂಭಿಕ ಮುನ್ನಡೆ ಕಾಯ್ದುಕೊಂಡಿರುವ ಕಾಂಗ್ರೆಸ್, ಸರಳ ಬಹುಮತದತ್ತ ಸಾಗುತ್ತಿದೆ.
ಸಚಿನ್ ಪೈಲಟ್
ಸಚಿನ್ ಪೈಲಟ್

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಬಿರುಸಿನಿಂದ ಸಾಗುತ್ತಿದ್ದು, ಕಾಂಗ್ರೆಸ್ ಪಕ್ಷ ಎಲ್ಲೆಡೆ ಉತ್ತಮ ಮುನ್ನಡೆ ಕಾಯ್ದುಕೊಂಡಿದೆ. ಆರಂಭಿಕ ಮುನ್ನಡೆ ಕಾಯ್ದುಕೊಂಡಿರುವ ಕಾಂಗ್ರೆಸ್, ಸರಳ ಬಹುಮತದತ್ತ ಸಾಗುತ್ತಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್, 'ಕಾಂಗ್ರೆಸ್‌ಗೆ ಬಹುಮತವಿದೆ, ನಾವು ಭರ್ಜರಿ ಗೆಲುವು ಸಾಧಿಸುತ್ತೇವೆ. ನಾವು ನೀಡಿದ '40% ಕಮಿಷನ್ ಸರ್ಕಾರ' ಎಂಬ ಘೋಷಣೆಯನ್ನು ಸಾರ್ವಜನಿಕರು ಒಪ್ಪಿಕೊಂಡಿದ್ದಾರೆ' ಎಂದು ಹೇಳಿದರು.

ಇದು ಬಿಜೆಪಿಯನ್ನು ಸೋಲಿಸಲು ನಾವು ಎತ್ತಿದ ಪ್ರಮುಖ ವಿಷಯವಾಗಿದೆ. ಜನರು ಅದನ್ನು ಒಪ್ಪಿಕೊಂಡು ಕಾಂಗ್ರೆಸ್‌ಗೆ ಬಹುಮತ ನೀಡಿದ್ದಾರೆ ಎಂದು ಅವರು ಸಂತೋಷ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸದ್ಯದ ಟ್ರೆಂಡ್ ಪ್ರಕಾರ, 224 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 119 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, 72 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉಳಿದಂತೆ ಜೆಡಿಎಸ್ 25 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದು ಖಚಿತ. ಆದರೆ, ಬಿಜೆಪಿ ಇತರ ಪಕ್ಷಗಳ ಶಾಸಕರು ಮತ್ತು ಸ್ವತಂತ್ರ ಅಭ್ಯರ್ಥಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲು ಪ್ರಯತ್ನಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಸಂಸದ ಸಿಎಂ ಕಮಲ್ ನಾಥ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com