ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023: ಧಾರವಾಡ ಕ್ಷೇತ್ರದಲ್ಲಿ ವಿನಯ್ ಕುಲಕರ್ಣಿಗೆ ಭರ್ಜರಿ ಜಯ

ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿನಯ್ ಕುಲಕರ್ಣಿ ಭರ್ಜರಿ ಜಯ ಸಾಧಿಸಿದ್ದು, 18037 ಮತಗಳ ಅಂತರದಲ್ಲಿ ಜಯಭೇರಿ ಭಾರಿಸಿದ್ದಾರೆ.
ವಿನಯ್ ಕುಲಕರ್ಣಿ
ವಿನಯ್ ಕುಲಕರ್ಣಿ

ಬೆಂಗಳೂರು: ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿನಯ್ ಕುಲಕರ್ಣಿ ಭರ್ಜರಿ ಜಯ ಸಾಧಿಸಿದ್ದು, 18037 ಮತಗಳ ಅಂತರದಲ್ಲಿ ಜಯಭೇರಿ ಭಾರಿಸಿದ್ದಾರೆ.

ವಿನಯ್ ಕುಲಕರ್ಣಿ ಒಟ್ಟಾರೆ 8933 ಮತಗಳನ್ನು ಪಡೆದಿದ್ದು, ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಅಮೃತ್ ಅಯ್ಯಪ್ಪ ದೇಸಾಯಿ (71296 ಮತಗಳು)18037 ಮತಗಳ ಅಂತರದಲ್ಲಿ ಜಯಭೇರಿ ಭಾರಿಸಿದ್ದಾರೆ. ಇಲ್ಲಿ ನೋಟಾಗೆ 1521 ಮತಗಳು ಬಂದಿದ್ದು, ಜೆಡಿಎಸ್ ಅಭ್ಯರ್ಥಿ ಮಂಜುನಾಥ್ ಲಕ್ಷ್ಮಪ್ಪ ಹಗೆದರ್ 921ಮತಗಳನ್ನು ಪಡೆದಿದ್ದಾರೆ. ಸ್ವತಂತ್ರ ಅಭ್ಯರ್ಥಿ ಶಕೀಲ್ ಅಬ್ದುಲ್ ಸತ್ತಾರ್ 879 ಮತಗಳನ್ನು ಪಡೆದಿದ್ದು, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಪ್ರವೀಣ್ ಸಂಗನಗೌಡ ಪಾಟೀಲ್ 659 ಮತಗಳನ್ನು ಪಡೆದಿದ್ದಾರೆ.

ಇಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಸೇರಿದಂತೆ ಒಟ್ಟು 12 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಕ್ಷೇತ್ರಕ್ಕೆ ಕಾಲಿಡದೇ ಗೆದ್ದು ಬೀಗಿದ ವಿನಯ್ ಕುಲಕರ್ಣಿ
ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ್ ಕುಲಕರ್ಣಿಗೆ ಕ್ಷೇತ್ರ ಪ್ರವೇಶಕ್ಕೆ ಕೋರ್ಟ್ ನಿರಾಕರಿಸಿತ್ತು. ಹೀಗಾಗಿ ಧಾರವಾಡ ಕ್ಷೇತ್ರಕ್ಕೆ ಪ್ರವೇಶ ಇಲ್ಲದಿದ್ದರೂ ವಿನಯ್ ಕುಲಕರ್ಣಿ ಅವರು ಕ್ಷೇತ್ರದಿಂದ ಹೊರಗಿದ್ದು, ಹಾಲಿ ಬಿಜೆಪಿ ಶಾಸಕ ಅಮೃತ್ ದೇಸಾಯಿ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ.

ಧಾರವಾಡ ಜಿ.ಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ನ್ಯಾಯಾಲಯ ಅನುಮತಿ ನಿರ್ಬಂಧಿಸಿತ್ತು. ಆದರೂ ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿದ್ದ ವಿನಯ್ ಕುಲಕರ್ಣಿ ಗೆಲುವು ಸಾಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com