ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023: ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ, ಚಾಮರಾಜಪೇಟೆಯಲ್ಲಿ ಜಮೀರ್ ಗೆ​ ಹಿನ್ನಡೆ

ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಆರಂಭಿಕ ಮತಎಣಿಕೆ ಪ್ರಕ್ರಿಯೆಯಲ್ಲಿ ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಆರಂಭಿಕ ಹಿನ್ನಡೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಆರಂಭಿಕ ಮತಎಣಿಕೆ ಪ್ರಕ್ರಿಯೆಯಲ್ಲಿ ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಆರಂಭಿಕ ಹಿನ್ನಡೆಯಾಗಿದೆ.

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರು ಹಿನ್ನಡೆಯನುಭವಿಸಿದ್ದು, ಬಿಜೆಪಿ ಅಭ್ಯರ್ಥಿ ಸಿಪಿ ಯೋಗೇಶ್ವರ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನು ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಹಿನ್ನಡೆಯನುಭವಿಸಿದ್ದು, ಚಾಮರಾಜನಗರ ಮತ್ತು ವರುಣಾ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಯ ವಿ.ಸೋಮಣ್ಣಗೆ ಹಿನ್ನಡೆಯಾಗಿದೆ. ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಮುನ್ನಡೆ ಸಾಧಿಸಿದ್ದಾರೆ.

ಇತ್ತ ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೂಡ ಹಿನ್ನಡೆ ಅನುಭವಿಸಿದ್ದು, 2ನೇ ಸುತ್ತಿನಲ್ಲೂ ಗೋಕಾಕ್​ನಲ್ಲಿ ರಮೇಶ್​ ಜಾರಕಿಹೊಳಿಗೆ ಹಿನ್ನಡೆ ಅನುಭವಿಸಿದ್ದಾರೆ.  ಬಳ್ಳಾರಿ ನಗರ ಕ್ಷೇತ್ರದಲ್ಲಿ ಸೋಮಶೇಖರ ರೆಡ್ಡಿಗೂ ಹಿನ್ನಡೆಯಾಗಿದೆ. ಶಿಕಾರಿಪುರದಲ್ಲಿ ಬಿಜೆಪಿಯ ವಿಜಯೇಂದ್ರ ಮುನ್ನಡೆ ಸಾಧಿಸಿದ್ದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದಲ್ಲಿ ಜಗದೀಶ್​​ ಶೆಟ್ಟರ್​ ಮುನ್ನಡೆ ಕಾಯ್ದುಕೊಂಡಿದ್ದಾರೆ. ಗದಗದಲ್ಲಿ ಕಾಂಗ್ರೆಸ್​ನ ಹೆಚ್.ಕೆ.ಪಾಟೀಲ್​ಗೆ ಹಿನ್ನಡೆ ಅನುಭವಿಸಿದ್ದು, ತೀರ್ಥಹಳ್ಳಿಯಲ್ಲಿ ಆರಗ ಜ್ಞಾನೇಂದ್ರಗೆ ಮುನ್ನಡೆ ಸಾಧಿಸಿದ್ದಾರೆ. 

ಉಳಿದಂತೆ ರಾಮನಗರದಲ್ಲಿ ಜೆಡಿಎಸ್​ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ​ಗೆ ಮುನ್ನಡೆ ಕಾಯ್ದುಕೊಂಡಿದ್ದು, ಹಾಸನದಲ್ಲಿ ಬಿಜೆಪಿಯ ಪ್ರೀತಂಗೌಡ ಹಿನ್ನಡೆಯಲ್ಲಿದ್ದರೆ, ಜೆಡಿಎಸ್​ನ ಸ್ವರೂಪ್​ಗೆ ಮುನ್ನಡೆ ಸಾಧಿಸಿದ್ದಾರೆ. ಶಿರಹಟ್ಟಿ ಬಿಜೆಪಿಯ ಡಾ.ಚಂದ್ರು ಲಮಾಣಿಗೆ ಮುನ್ನಡೆ ಸಾಧಿಸಿದ್ದು, ಅರಕಲಗೂಡಿನಲ್ಲಿ ಜೆಡಿಎಸ್​ ಅಭ್ಯರ್ಥಿ ಎ.ಮಂಜು ಮುನ್ನಡೆ ಸಾಧಿಸಿದ್ದಾರೆ. ಶ್ರೀನಿವಾಸಪುರ ಕ್ಷೇತ್ರದಲ್ಲಿ ರಮೇಶ್ ಕುಮಾರ್​ಗೆ ಹಿನ್ನಡೆಯಾಗಿದ್ದು, ಮಾಲೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್​ಕುಮಾರ್​ಗೆ ಮುನ್ನಡೆ ಸಾಧಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com