ಕರ್ನಾಟಕ ಚುನಾವಣಾ ಫಲಿತಾಂಶ: 100ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಮುನ್ನಡೆ, ಬಿಜೆಪಿ 73 ಸ್ಥಾನಗಳಲ್ಲಿ ಮುನ್ನಡೆ
ಬೆಂಗಳೂರು: ರಾಜ್ಯದಲ್ಲಷ್ಟೇ ಅಲ್ಲದೆ ರಾಷ್ಟ್ರ ಮಟ್ಟದಲ್ಲೂ ಗಮನ ಸೆಳೆದಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಶನಿವಾರ ಮುಂಜಾನೆ ಆರಂಭಗೊಂಡಿದ್ದು, ಅಂದಿನಿಂದ ಇಲ್ಲಿಯವರೆಗೂ ಕಾಂಗ್ರೆಸ್ ಅತ್ಯಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
10.30 ಗಂಟೆಗೆ ಲಭ್ಯವಾದ ಚುನಾವಣಾ ಆಯೋಗದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಕಾಂಗ್ರೆಸ್ 115 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 73 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಮತ್ತು ಜೆಡಿಎಸ್ 24 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಇನ್ನುಳಿದಂತೆ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಮತ್ತು ಸರ್ವೋದಯ ಕರ್ನಾಟಕ ಪಕ್ಷ ತಲಾ ಒಂದು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಮೂವರು ಸ್ವತಂತ್ರ ಅಭ್ಯರ್ಥಿಗಳು ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮೇ 10 ರಂದು ಮತದಾನ ಮುಗಿದ ನಂತರ ಹೊರಬಿದ್ದ ಎಕ್ಸಿಟ್ ಪೋಲ್‌ಗಳು ಅತಂತ್ರ ವಿಧಾನಸಭೆಯ ಸುಳಿವನ್ನು ನೀಡಿದ್ದವು. ಆದರೆ, ಕೆಲವು ಸಮೀಕ್ಷೆಗಳು ಕಾಂಗ್ರೆಸ್ ಸರಳ ಬಹುಮತದೊಂದಿಗೆ ಅಧಿಕಾರಕ್ಕೇರುತ್ತದೆ ಎಂದಿದ್ದವು. ಬಹುತೇಕ ಎಕ್ಸಿಟ್ ಪೋಲ್‌ಗಳು ಬಿಜೆಪಿ ತೀವ್ರವಾಗಿ ಕುಸಿಯಲಿದೆ ಎಂದು ಭವಿಷ್ಯ ನುಡಿದಿದ್ದವು.
ಬುಧವಾರ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತವನ್ನು ಪಡೆಯುವ ಎಲ್ಲಾ ಸೂಚನೆಗಳು ಕಾಣುತ್ತಿವೆ. ನಾಲ್ಕು ಎಕ್ಸಿಟ್ ಪೋಲ್‌ಗಳು ಪೂರ್ಣ ಬಹುಮತವನ್ನು ನೀಡಿದ್ದು, ಕೆಲವು ಪಕ್ಷವು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ತಿಳಿಸಿತ್ತು. ಅತಂತ್ರ ವಿಧಾನಸಭೆ ಸೃಷ್ಟಿಯಾದರೆ, ಅಂತಹ ಸಂದರ್ಭಗಳಲ್ಲಿ, ಜೆಡಿಎಸ್ ಕಿಂಗ್ ಮೇಕರ್ ಪಾತ್ರವನ್ನು ವಹಿಸಲು ಕಾದು ಕುಳಿತಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ