ರಾಹುಲ್ ಗಾಂಧಿಯನ್ನು ತಡೆಯಲು ಸಾಧ್ಯವಿಲ್ಲ, ಭಾರತ್ ಜೋಡೋ ಯಾತ್ರೆ ಫಲ ಕೊಟ್ಟಿದೆ: ಕಾಂಗ್ರೆಸ್

ಕರ್ನಾಟಕದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ ಅಧಿಕಾರದ ಚುಕ್ಕಾಣಿ ಹಾದಿ ಹಿಡಿಯುತ್ತಿದ್ದಂತೆ ಕಾಂಗ್ರೆಸ್ ವಿಡಿಯೊವೊಂದನ್ನು ಹಂಚಿಕೊಂಡಿದೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ ಅಧಿಕಾರದ ಚುಕ್ಕಾಣಿ ಹಾದಿ ಹಿಡಿಯುತ್ತಿದ್ದಂತೆ ಕಾಂಗ್ರೆಸ್ ವಿಡಿಯೊವೊಂದನ್ನು ಹಂಚಿಕೊಂಡಿದೆ. ಅದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಸಂಬಂಧಿಸಿದ ವಿಡಿಯೊವಾಗಿದ್ದು ಅವರನ್ನು ತಡೆದು ನಿಲ್ಲಿಸಲು ಸಾಧ್ಯವಿಲ್ಲ ಎಂಬ ಸಂದೇಶ ನೀಡಿದೆ.

50 ಸೆಕೆಂಡ್ ಗಳ ವಿಡಿಯೊದಲ್ಲಿ ಕೆಲ ತಿಂಗಳ ಹಿಂದೆ ರಾಹುಲ್ ಗಾಂಧಿ ಕರ್ನಾಟಕ ಸೇರಿದಂತೆ ವಿವಿಧ ಭಾಗಗಳಲ್ಲಿ ನಡೆಸಿದ ಭಾರತ್ ಜೋಡೋ ಯಾತ್ರೆಗೆ ಸಂಬಂಧಿಸಿದ ವಿಡಿಯೊ ಅದಾಗಿದೆ. ಸಿಯಾ ಅವರ 'ಅನ್ ಸ್ಟಾಪೇಬಲ್' ಸಂಗೀತವನ್ನು ಹಿನ್ನಲೆಯಾಗಿ ವಿಡಿಯೊ ಹೊಂದಿದೆ. 

ರಾಹುಲ್ ಅವರನ್ನು ಉದ್ದೇಶಿಸಿ ಕಾಂಗ್ರೆಸ್ ನಾನು ಅಜೇಯ, ತುಂಬಾ ವಿಶ್ವಾಸ ಹೊಂದಿದ್ದೇನೆ,  ಹೌದು, ನನ್ನನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಬರೆಯಲಾಗಿದೆ.

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ತಮಿಳು ನಾಡಿನ ಕನ್ಯಾಕುಮಾರಿಯಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದ ರಾಹುಲ್ ಗಾಂಧಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಯಾಣಿಸಿ ಜನವರಿ ತಿಂಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಕೊನೆಗೊಣಿಸಿದ್ದರು.

ಭಾರತ್ ಜೋಡೋ ಯಾತ್ರೆ ಅತ್ಯಂತ ನಿರ್ಣಾಯಕ ಸಾಮೂಹಿಕ ಸಂಪರ್ಕ ಕಾರ್ಯಕ್ರಮ ಎಂದು ಹೇಳಿದೆ.ಬೆಂಗಳೂರಿನ ಕಾಂಗ್ರೆಸ್ ಕೇಂದ್ರ ಕಚೇರಿ ಸೇರಿದಂತೆ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಸೇರಿ ಸಂಭ್ರಮಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com