ಸಾಕಷ್ಟು ಶ್ರಮ ಹಾಕಿದರೂ ಬಿಜೆಪಿಗೆ ಗೆಲುವು ಸಾಧ್ಯವಾಗಲಿಲ್ಲ, ಪಕ್ಷವನ್ನು ಪುನರ್ ಸಂಘಟಿಸಿ ಮತ್ತೆ ಗೆಲ್ಲುತ್ತೇವೆ: ಸಿಎಂ ಬೊಮ್ಮಾಯಿ

ಈ ಬಾರಿ ಚುನಾವಣೆಯಲ್ಲಿ ಸಾಕಷ್ಟು ಪ್ರಯತ್ನ ಹಾಕಿದರೂ ಬಿಜೆಪಿಗೆ ಗೆಲುವು ಸಾಧ್ಯವಾಗಲಿಲ್ಲ. ಇನ್ನೂ ಫಲಿತಾಂಶ ಪೂರ್ಣವಾಗಿ ಬಂದಿಲ್ಲ, ಪೂರ್ಣ ಫಲಿತಾಂಶ ಹೊರಬಂದ ನಂತರ ಪಕ್ಷದಲ್ಲಿ ವಿಸ್ತೃತ ಚರ್ಚೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Updated on

ಹುಬ್ಬಳ್ಳಿ: ಈ ಬಾರಿ ಚುನಾವಣೆಯಲ್ಲಿ ಸಾಕಷ್ಟು ಪ್ರಯತ್ನ ಹಾಕಿದರೂ ಬಿಜೆಪಿಗೆ ಗೆಲುವು ಸಾಧ್ಯವಾಗಲಿಲ್ಲ. ಇನ್ನೂ ಫಲಿತಾಂಶ ಪೂರ್ಣವಾಗಿ ಬಂದಿಲ್ಲ, ಪೂರ್ಣ ಫಲಿತಾಂಶ ಹೊರಬಂದ ನಂತರ ಪಕ್ಷದಲ್ಲಿ ವಿಸ್ತೃತ ಚರ್ಚೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಕ್ಷವನ್ನು ಪುನರ್ ಸಂಘಟಿಸಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ, ಮುಂದಿನ ವರ್ಷ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಪೂರ್ಣ ಪರಿಶ್ರಮ ಹಾಕುತ್ತೇವೆ ಎಂದರು.

ಚುನಾವಣೆಯ ಫಲಿತಾಂಶ ಬಹುತೇಕ ಕಾಂಗ್ರೆಸ್ ಪರವಾಗಿದ್ದು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಏರುವುದು ನಿಚ್ಚಳವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com