ಬಿಜೆಪಿ ಕೋರ್ ಕಮಿಟಿ ಸಭೆ ಕರೆದು ಪಕ್ಷದ ಸೋಲಿನ ಬಗ್ಗೆ ಆತ್ಮಾವಲೋಕನ: ಪ್ರಹ್ಲಾದ್ ಜೋಷಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಪಕ್ಷದ ಸೋಲನ್ನು ವಿನಮ್ರತೆಯಿಂದ ಒಪ್ಪಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕಾಂಗ್ರೆಸ್ ಪಕ್ಷವು ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ ಎಂದು ಬಿಜೆಪಿ ಆಶಿಸುತ್ತಿದೆ ಎಂದು ಹೇಳಿದರು. 
ಪ್ರಹ್ಲಾದ್ ಜೋಷಿ
ಪ್ರಹ್ಲಾದ್ ಜೋಷಿ

ಹುಬ್ಬಳ್ಳಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಪಕ್ಷದ ಸೋಲನ್ನು ವಿನಮ್ರತೆಯಿಂದ ಒಪ್ಪಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕಾಂಗ್ರೆಸ್ ಪಕ್ಷವು ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ ಎಂದು ಬಿಜೆಪಿ ಆಶಿಸುತ್ತಿದೆ ಎಂದು ಹೇಳಿದರು. 

ರಾಜ್ಯದಲ್ಲಿ ನೂತನ ಸರ್ಕಾರ ರಚನೆಯಾಗಲಿದ್ದು, ಅದರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನಿಕಟವಾಗಿ ಸಹಕಾರ ನೀಡಲಿದೆ ಎಂದರು. ಬಿಜೆಪಿಯ ಕೋರ್ ಕಮಿಟಿಯು ಪಕ್ಷಕ್ಕೆ ಎಲ್ಲಿ ತಪ್ಪಾಗಿದೆ ಮತ್ತು ಅದರ ತಂತ್ರವು ಹೇಗೆ ವಿಫಲವಾಗಿದೆ ಎಂಬುದನ್ನು ವಿಶ್ಲೇಷಿಸಲು ಸಭೆ ನಡೆಸಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಆತ್ಮಾವಲೋಕನದ ನಂತರ ಪಕ್ಷವನ್ನು ಪುನರ್ ಸಂಘಟಿಸಿ ತಳಹದಿಯನ್ನು ಮತ್ತಷ್ಟು ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. ಪಕ್ಷದ ಸೋಲಿಗೆ ಆಡಳಿತ ವಿರೋಧಿ ಅಲೆ ಒಂದು ಕಾರಣವಾಗಿರಬಹುದು ಎಂದು ಹೇಳಿದ ಕೇಂದ್ರ ಸಚಿವರು, ಹಿನ್ನಡೆಗೆ ಇತರ ಕಾರಣಗಳು ಕೋರ್ ಕಮಿಟಿ ಸಭೆಯ ನಂತರವೇ ತಿಳಿಯಲಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com