ಕಾಂಗ್ರೆಸ್ ಅಭ್ಯರ್ಥಿಗಳಿಗೆ ವಿಜಯಮಾಲೆ: ಸತೀಶ್ ಜಾರಕಿಹೊಳಿ ಭರ್ಜರಿ ಗೆಲುವು; ಚಳ್ಳಕೆರೆ ಟಿ ರಘುಮೂರ್ತಿಗೆ ಜಯ!
ಯಮಕನಮರಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಸತೀಶ್ ಜಾರಕಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸುಮಾರು 40 ಸಾವಿರ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.
Published: 13th May 2023 12:40 PM | Last Updated: 13th May 2023 07:37 PM | A+A A-

ಸತೀಶ್ ಜಾರಕಿಹೊಳಿ ಮತ್ತು ಟಿ ರಘುಮೂರ್ತಿ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 10 ರಂದು ಚುನಾವಣೆ ನಡೆದಿತ್ತು, ಇಂದು ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದೆ.
ಯಮಕನಮರಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಸತೀಶ್ ಜಾರಕಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸುಮಾರು 40 ಸಾವಿರ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.
ಇನ್ನೂ ಚಳ್ಳಕೆರೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಟಿ ರಘುಮೂರ್ತಿ 16 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳು ಬಹುತೇಕ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುತ್ತಿದ್ದು, ಸ್ಪಷ್ಟ ಬಹುಮತ ದೊರೆಯುವ ನಿರೀಕ್ಷೆಯಿದೆ.