ಕರ್ನಾಟಕ ಚುನಾವಣೆ ಫಲಿತಾಂಶ: ಬಿರುಸಿನ ಮತ ಎಣಿಕೆ; ಆರಂಭಿಕ ಮುನ್ನಡೆ ಕಾಯ್ದುಕೊಂಡ ಬಿಜೆಪಿ, ಕಾಂಗ್ರೆಸ್‌ ಪೈಪೋಟಿ

ಶನಿವಾರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ರಾಜ್ಯದಾದ್ಯಂತ ಆಡಳಿತಾರೂಢ ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಕೂಡ ತೀವ್ರ ಪೈಪೋಟಿ ನೀಡುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಶನಿವಾರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ರಾಜ್ಯದಾದ್ಯಂತ ಆಡಳಿತಾರೂಢ ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಕೂಡ ತೀವ್ರ ಪೈಪೋಟಿ ನೀಡುತ್ತಿದೆ.

ಆರಂಭಿಕ ಟ್ರೆಂಡ್‌ಗಳ ಪ್ರಕಾರ ಬಿಜೆಪಿ 41, ಕಾಂಗ್ರೆಸ್ 36 ಮತ್ತು ಜೆಡಿಎಸ್ 13ರಲ್ಲಿ ಮುಂದಿವೆ.

ಆರಂಭದಲ್ಲಿ ಅಂಚೆ ಮತಗಳ ಎಣಿಕೆ ಕಾರ್ಯ ನಡೆಯುತ್ತಿತ್ತು. 224 ಸದಸ್ಯ ಬಲದ ವಿಧಾನಸಭೆಗೆ ಮೇ 10ರಂದು ಚುನಾವಣೆ ನಡೆದಿತ್ತು. 

ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಅತಂತ್ರ ವಿಧಾನಸಭೆಯ ಸುಳಿವು ನೀಡಿದ್ದು, ಮುಂದಿನ ತಂತ್ರಗಳನ್ನು ಹೆಣೆಯುವಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ನಿರತವಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com