ಚನ್ನಪಟ್ಟಣ ವಿಧಾನಸಭಾ ಚುನಾವಣೆ ಫಲಿತಾಂಶ: ಸಿ.ಪಿ ಯೋಗೇಶ್ವರ್ ಹಿಂದಿಕ್ಕಿ ಹೆಚ್'ಡಿ.ಕುಮಾರಸ್ವಾಮಿ ಮುನ್ನಡೆ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮತ ಎಣಿಕೆ ಭರದಿಂದ ಮುಂದುವರೆದಿದ್ದು, ಬೆಳಗ್ಗೆ 10:30ರ ವೇಳೆಗೆ ಜೆಡಿಎಸ್ ಅಭ್ಯರ್ಥಿ ಕುಮಾರಸ್ವಾಮಿ 14,400 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
Published: 13th May 2023 10:39 AM | Last Updated: 13th May 2023 10:39 AM | A+A A-

ಹೆಚ್.ಡಿ.ಕುಮಾರಸ್ವಾಮಿ
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮತ ಎಣಿಕೆ ಭರದಿಂದ ಮುಂದುವರೆದಿದ್ದು, ಬೆಳಗ್ಗೆ 10:30ರ ವೇಳೆಗೆ ಜೆಡಿಎಸ್ ಅಭ್ಯರ್ಥಿ ಕುಮಾರಸ್ವಾಮಿ 14,400 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಬೆಳಗ್ಗೆ 9:03 ಸಮಯಕ್ಕೆ ಬಿಜೆಪಿ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಮುನ್ನಡೆ ಸಾಧಿಸಿದ್ದು, ಜೆಡಿಎಸ್ ಅಭ್ಯರ್ಥಿ ಕುಮಾರಸ್ವಾಮಿಗೆ ಹಿನ್ನಡೆಯಾಗಿತ್ತು. ಇದೀಗ ಕುಮಾರಸ್ವಾಮಿಯವರು ಮುನ್ನಡೆ ಸಾಧಿಸಿದ್ದಾರೆ.
ಗೊಂಬೆ ನಾಡು ಚನ್ನಪಟ್ಟಣ ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರವಾಗಿದ್ದು, ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ನೇರಾ ನೇರ ಪೈಪೋಟಿ ಇದೆ. ಈ ಬಾರಿ ಕಾಂಗ್ರೆಸ್ ಗಂಗಾಧರ್ ಅವರನ್ನು ಕಣಕ್ಕಿಳಿಸಿದ್ದು, ಪ್ರಭಾವಿ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಿ.ಪಿಯೋಗೇಶ್ವರ್ ಅವರನ್ನು ಎದುರಿಸಿದ್ದಾರೆ.