ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಲಿದೆ, ಕಾಂಗ್ರೆಸ್‌ಗೆ ನನ್ನ ಬೆಂಬಲ: ಗಾಲಿ ಜನಾರ್ದನ ರೆಡ್ಡಿ

‘ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಲಿದ್ದು, ಕಾಂಗ್ರೆಸ್‌ಗೆ ಬೆಂಬಲ ನೀಡುತ್ತೇನೆ’ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಹೇಳಿದ್ದಾರೆ
ಜನಾರ್ದನ ರೆಡ್ಡಿ
ಜನಾರ್ದನ ರೆಡ್ಡಿ

ಕೊಪ್ಪಳ: ‘ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಲಿದ್ದು, ಕಾಂಗ್ರೆಸ್‌ಗೆ ಬೆಂಬಲ ನೀಡುತ್ತೇನೆ’ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಹೃದಯಾಘಾತದಿಂದ ಬಳಲುತ್ತಿರುವ ವಿಧಾನಪರಿಷತ್ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕೆಆರ್‌ಪಿಪಿ' ಐದರಿಂದ ಆರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಮತ್ತೆ ಬಿಜೆಪಿ ಜೊತೆ ಕೈ ಜೋಡಿಸಲು ಸಾಧ್ಯವಿಲ್ಲ. ಹೀಗಾಗಿ, ಅತಂತ್ರ ವಿಧಾನಸಭೆ ರಚನೆಯಾದರೆ ಕಾಂಗ್ರೆಸ್‌ಗೆ ಬೆಂಬಲ ನೀಡಲು ನಿರ್ಧರಿಸಿದ್ದೇನೆ ಎಂದು ಅವರು ಹೇಳಿದರು.

ಬಿಜೆಪಿ ನನಗೆ ಮಾಡಿದ ಮೋಸ ಎಲ್ಲರಿಗೂ ಗೊತ್ತಿದೆ. ಆದ್ದರಿಂದ ಆ ಪಕ್ಷದ ಜೊತೆ ಹೋಗುವುದಿಲ್ಲ. ಗಂಗಾವತಿ ಕ್ಷೇತ್ರದಲ್ಲಿ ನಾನು, ಬಳ್ಳಾರಿ ನಗರದಲ್ಲಿ ನನ್ನ ಪತ್ನಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮತದಾನ ಮಾಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರೆ ತಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (KRPP) ಬೆಂಬಲ ನೀಡುತ್ತದೆ ಎಂದು ಹೇಳಿದ್ದರು.

ರಾಜ್ಯದ 49 ಕ್ಷೇತ್ರಗಳಲ್ಲಿ ಇತ್ತೀಚೆಗೆ ಸ್ಥಾಪನೆ ಮಾಡಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com