ಲಿಂಗಾಯತ ಸಮುದಾಯದ ಎಫೆಕ್ಟ್: ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆ
ಉತ್ತರ ಕರ್ನಾಟಕದ ಲಿಂಗಾಯತ ಸಮಾಜದ ಕಟ್ಟಾ ನಾಯಕ ಜಗದೀಶ ಶೆಟ್ಟರ್ ಅವರು ತಮ್ಮ ತವರು ಕ್ಷೇತ್ರ ಹುಬ್ಬಳ್ಳಿ-ಧಾರವಾಡದಲ್ಲಿ ಹಿನ್ನಡೆ ಅನುಭವಿಸುತ್ತಿರುವಾಗಲೇ, ಬಿಜೆಪಿ ಕೂಡ ತನ್ನ ಭದ್ರಕೋಟೆಯಾದ ಉತ್ತರ ಕರ್ನಾಟಕದಲ್ಲಿ ಭಾರಿ ಹಿನ್ನೆಡೆ ಅನುಭವಿಸುತ್ತಿದೆ.
Published: 13th May 2023 12:05 PM | Last Updated: 13th May 2023 07:35 PM | A+A A-

ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ಉತ್ತರ ಕರ್ನಾಟಕದ ಲಿಂಗಾಯತ ಸಮಾಜದ ಕಟ್ಟಾ ನಾಯಕ ಜಗದೀಶ ಶೆಟ್ಟರ್ ಅವರು ತಮ್ಮ ತವರು ಕ್ಷೇತ್ರ ಹುಬ್ಬಳ್ಳಿ-ಧಾರವಾಡದಲ್ಲಿ ಹಿನ್ನಡೆ ಅನುಭವಿಸುತ್ತಿರುವಾಗಲೇ, ಬಿಜೆಪಿ ಕೂಡ ತನ್ನ ಭದ್ರಕೋಟೆಯಾದ ಉತ್ತರ ಕರ್ನಾಟಕದಲ್ಲಿ ಭಾರಿ ಹಿನ್ನೆಡೆ ಅನುಭವಿಸುತ್ತಿದೆ. ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.
ಜಗದೀಶ್ ಶೆಟ್ಟರ್ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿದ್ದಾರೆ.
ಹುಬ್ಬಳ್ಳಿ ಜನಸಂಘಕ್ಕೆ ದಕ್ಷಿಣ ಭಾರತದಲ್ಲಿ ಮೊದಲ ಕ್ಷೇತ್ರವಾಗಿದ್ದು, ಜಗದೀಶ್ ಶೆಟ್ಟರ್ ಅವರ ಚಿಕ್ಕಪ್ಪ ಸದಾಶಿವ ಶೆಟ್ಟರ್ 1968 ರಲ್ಲಿ ಮೊದಲ ಬಾರಿಗೆ ಅಲ್ಲಿಂದ ಗೆಲುವು ಸಾಧಿಸಿದ್ದರು. ಹುಬ್ಬಳ್ಳಿಯ ಮೇಯರ್ ಆಗಿದ್ದ ಜಗದೀಶ್ ಶೆಟ್ಟರ್ ಅವರ ತಂದೆ ಶಿವಪ್ಪ ಶೆಟ್ಟರ್ ದಕ್ಷಿಣ ಭಾರತದಲ್ಲಿ ಜನಸಂಘದಿಂದ ಮೊದಲ ಮೇಯರ್ ಆಗಿದ್ದರು.
ಹುಬ್ಬಳ್ಳಿ-ಧಾರವಾಡ ಕ್ಷೇತ್ರವು ಪ್ರಬಲ ಬಿಜೆಪಿ, ಆರ್‌ಎಸ್‌ಎಸ್ ಭದ್ರಕೋಟೆಯಾಗಿದ್ದು, ಈ ಭಾಗದಲ್ಲಿ ಆ ಪಕ್ಷವನ್ನು ಅಸ್ಥಿರಗೊಳಿಸುವುದು ಕಷ್ಟವಾಗಿತ್ತು.
ಇದನ್ನೂ ಓದಿ: ಕರ್ನಾಟಕ ಚುನಾವಣಾ ಫಲಿತಾಂಶ: 100ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಮುನ್ನಡೆ, ಬಿಜೆಪಿ 73 ಸ್ಥಾನಗಳಲ್ಲಿ ಮುನ್ನಡೆ
ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಲ್ಲಿ ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮುನ್ನಡೆ ಸಾಧಿಸಿದ್ದಾರೆ. ಕೇಸರಿ ಪಕ್ಷವು ಅವರಿಗೆ ಟಿಕೆಟ್ ನಿರಾಕರಿಸಿದ ನಂತರ, ಸವದಿ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರಿದ್ದರು.
ಬೆಳಗಾವಿ, ಉತ್ತರ ಕನ್ನಡ, ಗದಗ, ಹಾವೇರಿ, ಬಾಗಲಕೋಟ, ವಿಜಯಪುರ, ಧಾರವಾಡದ ಹಲವು ಕ್ಷೇತ್ರಗಳಲ್ಲಿ ಶೆಟ್ಟರ್ ಎಫೆಕ್ಟ್ ಕಾಂಗ್ರೆಸ್‌ಗೆ ಕೆಲಸ ಮಾಡಿದಂತಿದ್ದು, ಈ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಕಾಂಗ್ರೆಸ್‌ಗಿಂತ ಹಿಂದೆ ಬಿದ್ದಿದೆ.