ಸಿಎಂ ಗದ್ದುಗೆ ಮೇಲೆ ಡಿ ಕೆ ಶಿವಕುಮಾರ್ ಕಣ್ಣು: ನೊಣವಿನಕೆರೆ ಅಜ್ಜಯ್ಯನ ಭೇಟಿಗೆ ಪತ್ನಿ ಜೊತೆ ಬಂದ 'ಕನಕಪುರ ಬಂಡೆ'

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 136 ಸ್ಥಾನಗಳೊಂದಿಗೆ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಸಿಕ್ಕಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್ ಅವರಿಗೆ ಇದು ಅದ್ವಿತೀಯ ಗೆಲುವಾಗಿದ್ದು, ಸಿಎಂ ಕುರ್ಚಿಯ ಮೇಲೆ ದೃಷ್ಟಿ ನೆಟ್ಟಿದ್ದಾರೆ.
ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಡಿ ಕೆ ಶಿವಕುಮಾರ್ ಗೆ ಸಿಹಿ ತಿನ್ನಿಸಿದ ಮಲ್ಲಿಕಾರ್ಜುನ ಖರ್ಗೆ
ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಡಿ ಕೆ ಶಿವಕುಮಾರ್ ಗೆ ಸಿಹಿ ತಿನ್ನಿಸಿದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 136 ಸ್ಥಾನಗಳೊಂದಿಗೆ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಸಿಕ್ಕಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್ ಅವರಿಗೆ ಇದು ಅದ್ವಿತೀಯ ಗೆಲುವಾಗಿದ್ದು, ಸಿಎಂ ಕುರ್ಚಿಯ ಮೇಲೆ ದೃಷ್ಟಿ ನೆಟ್ಟಿದ್ದಾರೆ.

 ಇಂದು ಭಾನುವಾರ ಸಂಜೆ ಶಾಸಕಾಂಗ ಸಭೆಯನ್ನು ನಡೆಸಲಿದ್ದು, ಅದಕ್ಕಿಂದ ಮೊದಲು ಡಿ ಕೆ ಶಿವಕುಮಾರ್ ಇಂದು ಬೆಳಗ್ಗೆ ಪತ್ನಿ ಜೊತೆಗೂಡಿ ತುಮಕೂರಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ವೃಷಭ ದೇಶಿಕೇಂದ್ರ ಶ್ರೀಗಳ ದರ್ಶನ ಪಡೆದಿದ್ದಾರೆ. 

ಈ ಕುರಿತು ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ್ದ ಶಿವಕುಮಾರ್, 'ಕಷ್ಟದಲ್ಲಿ ನನ್ನನ್ನು ಪಾರು ಮಾಡಿದ ಅಜ್ಜಯ್ಯನ ದರ್ಶನಕ್ಕೆ ಹೋಗುತ್ತಿದ್ದೇನೆ. ಎಲ್ಲಿ ಭಕ್ತಿ ಇದೆಯೋ, ಅಲ್ಲಿ ಭಗವಂತ ಇರುತ್ತಾನೆ. ಎಲ್ಲಿ ಶ್ರಮವಿದೆಯೋ ಅಲ್ಲಿ ಪ್ರತಿಫಲ ಇದೆ. ಈ ಹಿಂದೆಯೇ ನಾನು 136 ನಂಬರ್​ ಬರುತ್ತೆ ಎಂದು ಹೇಳಿದ್ದೆ ಪೂರ್ಣ ಬಹುಮತವನ್ನು ಪಡೆದಿದ್ದೇವೆ ಎಂದು ಹೇಳಿದ್ದಾರೆ. 

ಇನ್ನೂ ಕುತೂಹಲ ಪಡಬೇಕಿಲ್ಲ, ಯಾರೂ ಟೆನ್ಷನ್ ಮಾಡಿಕೊಳ್ಳಬೇಡಿ. ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇದ್ದಾನೆ. ನಾನು ನಂಬಿರುವ ಶಕ್ತಿ ನನಗೆ ಮಾರ್ಗದರ್ಶನ ಕೊಟ್ಟಿದೆ. ಕಷ್ಟದಲ್ಲಿ ನನ್ನ ಪಾರು ಮಾಡಿದ ನೊಣವಿನಕೆರೆ ಅಜ್ಜಯ್ಯನ ಭೇಟಿಗೆ ನಾನು ಹೋಗುತ್ತಿದ್ದೇನೆ, ಒಂದು ಗಂಟೆಗೆ ವಾಪಾಸ್​ ಬರುತ್ತೇನೆ ಎಂದು ಹೇಳಿದರು.

ಶಿವಕುಮಾರ್ ಸಿಎಂ ಅಭಿಯಾನ: ಇನ್ನು ಬೆಂಗಳೂರು ಸೇರಿದಂತೆ ರಾಜ್ಯದ ಅಲ್ಲಲ್ಲಿ ಡಿ ಕೆ ಶಿವಕುಮಾರ ಅಭಿಮಾನಿಗಳು, ಡಿ ಕೆ ಶಿವಕುಮಾರ್ ಮುಂದಿನ ಸಿಎಂ ಎಂದು ಬ್ಯಾನರ್, ಪೋಸ್ಟರ್ ಹಾಕಿ, ಘೋಷಣೆ ಕೂಗುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com