ಕರಾವಳಿ ಕರ್ನಾಟಕದಲ್ಲಿ ನೆಲೆ ಉಳಿಸಿಕೊಂಡ ಬಿಜೆಪಿ, ಮತ್ತೆ ನಾಲ್ಕು ಸ್ಥಾನಗಳನ್ನು ತೆಕ್ಕೆಗೆ ತೆಗೆದುಕೊಂಡ ಕಾಂಗ್ರೆಸ್!

ರಾಜ್ಯದಲ್ಲಿ ಕಾಂಗ್ರೆಸ್ ಪರವಾಗಿ ಬಲವಾದ ಅಲೆಯ ಹೊರತಾಗಿಯೂ, ಬಿಜೆಪಿಯು ಕರಾವಳಿ ಕರ್ನಾಟಕದ ತನ್ನ ಕೋಟೆಯನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದೆ. 2018ರಲ್ಲಿ 18 ಕ್ಷೇತ್ರಗಳ ಪೈಕಿ 16 ಸ್ಥಾನ ಗೆದ್ದಿದ್ದ ಬಿಜೆಪಿ, ಈಗ ಕೇವಲ 13 ಸ್ಥಾನಗಳಿಗೆ ತೃಪ್ತಿಪಡಬೇಕಾಯಿತು.
ಬಿಜೆಪಿ
ಬಿಜೆಪಿ

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪರವಾಗಿ ಬಲವಾದ ಅಲೆಯ ಹೊರತಾಗಿಯೂ, ಬಿಜೆಪಿಯು ಕರಾವಳಿ ಕರ್ನಾಟಕದ ತನ್ನ ಕೋಟೆಯನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದೆ. 2018ರಲ್ಲಿ 18 ಕ್ಷೇತ್ರಗಳ ಪೈಕಿ 16 ಸ್ಥಾನ ಗೆದ್ದಿದ್ದ ಬಿಜೆಪಿ, ಈಗ ಕೇವಲ 13 ಸ್ಥಾನಗಳಿಗೆ ತೃಪ್ತಿಪಡಬೇಕಾಯಿತು.

ಕಾಂಗ್ರೆಸ್ 2 ರಿಂದ 6ಕ್ಕೆ ತನ್ನ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದೆ. ಕರಾವಳಿ ಕರ್ನಾಟಕದಲ್ಲಿ ಜೆಡಿಎಸ್ ಖಾಲಿಯಾಗಿದೆ. ರಾಜಕೀಯ ಪಂಡಿತರ ಪ್ರಕಾರ, ಹಿಂದುತ್ವದ ಅಂಶವು ಆಡಳಿತ ವಿರೋಧಿ ಅಲೆಯನ್ನು ದೊಡ್ಡ ಪ್ರಮಾಣದಲ್ಲಿ ಸರಿದೂಗಿಸಲು ಬಿಜೆಪಿಗೆ ಸಹಾಯ ಮಾಡಿದೆ ಮತ್ತು ಬಜರಂಗ ದಳವನ್ನು ನಿಷೇಧಿಸುವ ಕಾಂಗ್ರೆಸ್‌ನ ಪ್ರಸ್ತಾಪವು ಕೇಸರಿ ಪಕ್ಷಕ್ಕೆ ತನ್ನ ಮತಗಳನ್ನು ಕ್ರೋಢೀಕರಿಸಲು ಸಹಾಯ ಮಾಡಿದೆ.

ಉತ್ತರ ಕನ್ನಡದಲ್ಲಿ ಬಿಜೆಪಿ ಬಹುತೇಕ ಸೋತಿದ್ದು, ಆರು ಸ್ಥಾನಗಳ ಪೈಕಿ ಎರಡನ್ನು ಮಾತ್ರ ಗೆದ್ದಿದೆ. ಸ್ಪೀಕರ್ ಮತ್ತು ಆರು ಬಾರಿ ಗೆದ್ದಿದ್ದ  ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮೊದಲ ಬಾರಿಗೆ ಸಿರಸಿಯಲ್ಲಿ ನೆಲಕಚ್ಚಬೇಕಾಯಿತು.

ಹಳಿಯಾಳದಿಂದ ಆರ್.ವಿ. ದೇಶಪಾಂಡೆ (ಕಾಂಗ್ರೆಸ್) ದಾಖಲೆಯ ಒಂಬತ್ತನೇ ಬಾರಿ ಗೆಲುವು ಸಾಧಿಸಿದ್ದಾರೆ. ಮಂಕಾಳ್ ವೈದ್ಯ (ಕಾಂಗ್ರೆಸ್) ಭಟ್ಕಳದಿಂದ 32 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕುಮಟಾದಲ್ಲಿ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ ಅವರ ಪುತ್ರಿ ನಿವೇದಿತ್ ಆಳ್ವ ಅವರು ಕೇವಲ 19,270 ಮತಗಳನ್ನು ಪಡೆದು ಹೀನಾಯ ಸೋಲು ಕಂಡಿದ್ದಾರೆ.

ಉಡುಪಿಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಅಲ್ಲಿ ಎಲ್ಲಾ ಐವರು ಅಭ್ಯರ್ಥಿಗಳು ಗೆದ್ದಿದ್ದಾರೆ. ಕಾರ್ಕಳದಿಂದ 4,600ಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿರುವ ವಿ ಸುನಿಲ್ ಕುಮಾರ್ ಹೊರತುಪಡಿಸಿ ಉಳಿದ ನಾಲ್ವರು ಉತ್ತಮ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಎಂಟು ಸ್ಥಾನಗಳ ಪೈಕಿ ಆರರಲ್ಲಿ ಬಿಜೆಪಿ ಗೆದ್ದಿದೆ. ಪುತ್ತೂರಿನಲ್ಲಿ ಕಾಂಗ್ರೆಸ್‌ನ ಅಶೋಕ್ ಕುಮಾರ್ ರೈ 4149 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಯು.ಟಿ. ಖಾದರ್ (ಕಾಂಗ್ರೆಸ್) ಮಂಗಳೂರಿನಲ್ಲಿ ಐದನೇ ಬಾರಿಗೆ ಗೆಲುವು ದಾಖಲಿಸಿದರೆ, ಹಿರಿಯ ಕಾಂಗ್ರೆಸ್ ನಾಯಕ ಬಿ ರಮಾನಾಥ್ ರೈ ಸೋತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com