ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೋವಿಡ್-19: ಬೆಂಗಳೂರಿನಲ್ಲಿ 1,100 ಸೇರಿ ರಾಜ್ಯದಲ್ಲಿ 5,783 ಹೊಸ ಪ್ರಕರಣ ಪತ್ತೆ; 15,290 ಚೇತರಿಕೆ; 168 ಸಾವು

ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 5,783 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಕೋವಿಡ್- 19 ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 2796121 ಆಗಿದೆ.

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 5,783 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಕೋವಿಡ್- 19 ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 2796121 ಆಗಿದೆ. 

15,290 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಈ ಮೂಲಕ ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 2625447ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 137050 ಆಗಿದೆ. 

ಸೋಂಕಿನಿಂದ ಇಂದು 168 ಮಂದಿ ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 33,602 ಆಗಿದೆ. ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ ಶೇ.4.05, ಮರಣ ಪ್ರಮಾಣ ಶೇ.2.90 ರಷ್ಟಿದೆ.

ಬೆಂಗಳೂರು ನಗರದಲ್ಲಿ 1,100 ಪ್ರಕರಣಗಳು ಪತ್ತೆಯಾಗಿದ್ದರೆ, 6,160 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 39 ಮಂದಿ ಸಾವನ್ನಪ್ಪಿದ್ದಾರೆ.

X

Advertisement

X
Kannada Prabha
www.kannadaprabha.com