

ಚಿತ್ರದುರ್ಗ: ಮೊಣಕಾಲ್ಮೂರಿನ ಬೀಜಿ ಕೆರೆಯ ಬಳಿ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನಿಂದ ಬಳ್ಳಾರಿಯ ಕಡೆ ಹೋಗುತ್ತಿದ್ದ ಕಾರು ಮತ್ತು ಬಳ್ಳಾರಿ ಕಡೆಯಿಂದ ಮೆಣಸಿನಕಾಯಿ ತುಂಬಿಕೊಂಡು ಬೆಂಗಳೂರಿನ ಕಡೆ ಆಗಮಿಸುತ್ತಿದ್ದ ಲಾರಿ ನಡುವೆ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಡಿಕ್ಕಿ ಸಂಭವಿಸಿದೆ.
ಕಾರು ಚಾಲಕ ಶ್ರೀರಾಮು ಸೇರಿ ಐವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎರಡೂ ವಾಹನಗಳ ಅತಿಯಾದ ವೇಗವೇ ಈ ದುರ್ಘಟನೆಗೆ ಕಾರಣ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮೊಣಕಾಲ್ಮೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.