ಮಂಗಳವಾರ ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ 109ನೇ ಜಯಂತಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಎಸ್ ಸಿ/ಎಸ್ ಟಿ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸುವ ನ್ಯಾ.ಎ.ಜೆ ಸದಾಶಿವ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.