ಪಿಯುಸಿ ರಸಾಯನ ಮರು ಪರೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ

ದ್ವಿತೀಯ ಪಿಯು ರಸಾಯನಶಾಸ್ತ್ರ ವಿಷಯದ ಮರುಪರೀಕ್ಷೆಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು...
ಹೈಕೋರ್ಟ್
ಹೈಕೋರ್ಟ್
ಬೆಂಗಳೂರು: ದ್ವಿತೀಯ ಪಿಯು ರಸಾಯನಶಾಸ್ತ್ರ ವಿಷಯದ ಮರುಪರೀಕ್ಷೆಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 
ಪಿಯುಸಿ ರಸಾಯನಶಾಸ್ತ್ರ ವಿಷಯದ ಮರುಪರೀಕ್ಷೆ ನಡೆಸದಂತೆ ಸರ್ಕಾರ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ನಿರ್ದೇಶಿಸಬೇಕು ಎಂದು ಕೋರಿ ಬಿ.ಎಚ್ ಚಂದ್ರಶೇಖರ್ ಸೇರಿ ಮೂವರು ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ರಸಾಯನಶಾಸ್ತ್ರ ವಿಷಯದ ಮರು ಪರೀಕ್ಷೆಗೆ ತಡೆ ನೀಡಲು ನಿರಾಕರಿಸಿದೆ. 
ನಿಗದಿಯಂತೆ ಏ 12ರಂದು ಪಿಯುಸಿ ರಸಾಯನಶಾಸ್ತ್ರ ಮರುಪರೀಕ್ಷೆ ನಡೆಯಲಿದೆ ನ್ಯಾಯಾಪೀಠ ಆದೇಶಿಸಿದೆ. 
ಮರುಪರೀಕ್ಷೆ ನಡೆಸುವುದರಿಂದ ಈಗಾಗಲೇ ಪರೀಕ್ಷೆ ಬರೆದಿರುವ ಸಾವಿರಾರು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಅನುಭವಿಸಲಿದ್ದಾರೆ. ಪಿಯುಸಿ ಪರೀಕ್ಷೆಯ ಬಳಿಕ ವಿವಿಧ ಸ್ಪರ್ಧಾತ್ಮ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಹಂತದಲ್ಲಿ ಮರು ಪರೀಕ್ಷೆ ಮಾಡಿದಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕವಾಗಿ ತೊಂದರೆಯಾಗಲಿದೆ ಎಂದು ಚಂದ್ರಶೇಕರ್ ಅರ್ಜಿಯಲ್ಲಿ ತಿಳಿಸಿದ್ದರು.
ಮಾರ್ಚ್ 21ರಂದು ರಸಾಯನಶಾಸ್ತ್ರ ಪರೀಕ್ಷೆ ನಡೆದಿತ್ತು. ಆದರೆ, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರಿಂದ ಮಾ.31ರಂದು ಮರುಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗಿತ್ತು. ಮತ್ತೆ 2ನೇ ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರಿಂದ ಇದೀಗ ಏ.12ಕ್ಕೆ ಮತ್ತೆ ಮರುಪರೀಕ್ಷೆ ದಿನಾಂಕ ನಿಗದಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com