ದ್ವಿತೀಯ ಪಿಯುಸಿ ಮರುಪರೀಕ್ಷೆ ಯಶಸ್ವಿ: ಡಾ.ರಾಮೇಗೌಡ

ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಮರುಪರೀಕ್ಷೆ ಮಂಗಳವಾರ ಯಶಸ್ವಿಯಾಗಿ ಮುಕ್ತಾಯಗೊಂಡಿದೆ...
ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ರಾಮೇಗೌಡ
ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ರಾಮೇಗೌಡ
Updated on

ಬೆಂಗಳೂರು: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಮರುಪರೀಕ್ಷೆ ಮಂಗಳವಾರ ಯಶಸ್ವಿಯಾಗಿ ಮುಕ್ತಾಯಗೊಂಡಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ (ಪ್ರಭಾರಿ) ಡಾ.ರಾಮೇಗೌಡ ತಿಳಿಸಿದ್ದಾರೆ.

ಪರೀಕ್ಷೆ ಮುಗಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ವ್ಯವಸ್ಥೆಯನ್ನು ಹಾಳು ಮಾಡಲು ಯತ್ನಿಸಿದವರ ಪ್ರಯತ್ನವನ್ನು ನಾವು ವಿಫಲಗೊಳಿಸಿದ್ದೇವೆ. ಈ ರೀತಿಯ ಕೆಟ್ಟ ಪ್ರಯತ್ನವು ಸಫಲವಾಗಲು ಸಾಧ್ಯವಿಲ್ಲ ಎಂದರು.

 ಇನ್ನು ಮುಂದೆಯೂ ಇದೇ ಮಾದರಿಯಲ್ಲಿ ಪರೀಕ್ಷೆ ನಡೆಸಲಾಗುವುದು. ಪ್ರಶ್ನೆಪತ್ರಿಕೆ ಸೋರಿಕೆ ಘಟನೆ ಮತ್ತೆ ಮರುಕಳಿಸದಂತೆ ಶಿಕ್ಷಣ ಇಲಾಖೆ ಮುಂಜಾಗ್ರತೆ ಕ್ರಮ ಕೈಗೊಳ್ಳಲಿದೆ. ನಿಗದಿತ ಸಮಯದಲ್ಲಿಯೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ರಾಮೇಗೌಡ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com