ಪಿಯು ಉಪನ್ಯಾಸಕರ ಮುಷ್ಕರ; ಸಮಸ್ಯೆ ಬಗೆಹರಿಸುತ್ತೇವೆ: ಪರಮೇಶ್ವರ್

ಪಿಯು ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕರಿಸಿ ನಡೆಸುತ್ತಿರುವ ಮುಷ್ಕರಕ್ಕೆ ಸಂಬಂಧಿಸಿದಂತೆ ಸಮಸ್ಯೆಯನ್ನು...
ಡಾ.ಜಿ ಪರಮೇಶ್ವರ್
ಡಾ.ಜಿ ಪರಮೇಶ್ವರ್
Updated on
ಬೆಂಗಳೂರು: ಪಿಯು ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕರಿಸಿ ನಡೆಸುತ್ತಿರುವ ಮುಷ್ಕರಕ್ಕೆ ಸಂಬಂಧಿಸಿದಂತೆ ಸಮಸ್ಯೆಯನ್ನು ಇತ್ಯರ್ಥ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ಈ ಸಂಬಂಧ ಮಂಗಳವಾರ ಉಪನ್ಯಾಸಕರ ಜೊತೆ ಮಾತುಕತೆ ನಡೆಸಲಾಗಿದೆ. ಶಿಕ್ಷಕರು ತಮ್ಮ ಹಠವನ್ನು ಮುಂದುವರೆಸದೇ ಮುಷ್ಕರವನ್ನು ಕೈಬಿಡಬೇಕು ಎಂದು ಮನವಿ ಮಾಡಿದ ಅವರು, ಉಪನ್ಯಾಸಕರ ಬೇಡಿಕೆಯನ್ನು ಈಡೇರಿಸುವಲ್ಲಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ. 
ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಸೋಮವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮಂಗಳವಾರ ಈ ಸಮಸ್ಯೆ ಬಗೆಹರಿಯುವ ಸಾಧ್ಯತೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com