ಪ್ರಮಾಣ ಪತ್ರದಲ್ಲಿ ಸುಳ್ಳು: ಕಾರ್ಪೋರೇಟರ್ ವಿರುದ್ಧ ಪ್ರಕರಣ ದಾಖಲಿಸಲು "ಹೈ" ಸೂಚನೆ

ಚುನಾವಣೆ ವೇಳೆ ಪ್ರಮಾಣ ಪತ್ರದಲ್ಲಿ ಸುಳ್ಳು ಹೇಳಿದ ಬಿಬಿಎಂಪಿ ಕಾರ್ಪೊರೇಟರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಕರ್ನಾಟಕ ಹೈಕೋರ್ಟ್ ಕೇಂದ್ರೀಯ ಅಪರಾಧ ವಿಭಾಗದ ಪೊಲೀಸರಿಗೆ ಸೂಚನೆ ನೀಡಿದ್ದಾರೆ...
ಕರ್ನಾಟಕ ಹೈಕೋರ್ಟ್ (ಸಂಗ್ರಹ ಚಿತ್ರ)
ಕರ್ನಾಟಕ ಹೈಕೋರ್ಟ್ (ಸಂಗ್ರಹ ಚಿತ್ರ)
Updated on: 

ಬೆಂಗಳೂರು: ಚುನಾವಣೆ ವೇಳೆ ಪ್ರಮಾಣ ಪತ್ರದಲ್ಲಿ ಸುಳ್ಳು ಹೇಳಿದ ಬಿಬಿಎಂಪಿ ಕಾರ್ಪೊರೇಟರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಕರ್ನಾಟಕ ಹೈಕೋರ್ಟ್ ಕೇಂದ್ರೀಯ ಅಪರಾಧ ವಿಭಾಗದ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ತಮ್ಮ ವಿರುದ್ಧ ಕ್ರಿಮಿನಲ್ ಅಪರಾಧ ಪ್ರಕರಣಗಳನ್ನು ಮುಚ್ಚಿಟ್ಟು ಚುನಾವಣೆ ವೇಳೆ ಸುಳ್ಳು ಪ್ರಮಾಣ ಪತ್ರ ನೀಡಿದ ಆರೋಪದ ಮೇಲೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಟಿಎಂ ಲೇಔಟ್ ವಾರ್ಡ್  ನಂಬರ್ 176ರ ಕಾರ್ಪೋರೇಟರ್ ಕೆ.ದೇವದಾಸ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಕೇಂದ್ರೀಯ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರಿಗೆ ಕರ್ನಾಟಕ ಹೈಕೋರ್ಟ್ ಸೂಚನೆ  ನೀಡಿದೆ. ಅಲ್ಲದೆ 90 ದಿನಗಳ ಅವಧಿಯೊಳಗೆ ಪ್ರಕರಣ ಸಂಬಂಧ ವರದಿ ನೀಡುವಂತೆ ತಿಳಿಸಿದೆ.

ಕಾರ್ಪೋರೇಟರ್ ದೇವದಾಸ್ ಅವರು ಉದ್ದೇಶಪೂರ್ವಕವಾಗಿಯೇ 2015ರ ಬಿಬಿಎಂಪಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ ತಮ್ಮ ಕ್ರಿಮಿನಲ್ ಅಪರಾಧ ಪ್ರಕರಣಗಳನ್ನು ನಮೂದಿಸಿಲ್ಲ ಎಂದು ಆರೋಪಿಸಿ ಹೆಚ್ ಕೆ ಮುತ್ತಪ್ಪ ಎಂಬುವವರು ಸಲ್ಲಿಸಿದ್ದರು. ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ಹೈಕೋರ್ಟ್ ನ್ಯಾಯಮೂರ್ತಿ ಎಲ್ ನಾರಾಯಣ ಸ್ವಾಮಿ ಅವರು, ಬಿಟಿಎಂ ಲೇಔಟ್ ಕಾರ್ಪೋರೇಟರ್ ಕೆ.ದೇವದಾಸ್ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದ್ದಾರೆ.

ಇದಕ್ಕೂ ಮೊದಲು ಜನಪ್ರತಿನಿಧಿ ಕಾಯ್ದೆಯಡಿಯಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾದ ಚುನಾಯಿತ ಪ್ರತಿನಿಧಿಗಳ ವಿರುದ್ದ ಕ್ರಮ ಕೈಗೊಳ್ಳಲು ಯಾವುದೇ ಕಾನೂನುಗಳಿಲ್ಲ ಎಂದು ಚುನಾವಣಾ ಆಯೋಗ ನ್ಯಾಯಾಲಯಕ್ಕೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸಿಸಿಬಿಗೆ ಪ್ರಕರಣ ದಾಖಲಿಸಲು ಹೈಕೋರ್ಟ್ ಸೂಚನೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com