ಇಂದಿನಿಂದ ಸಿಎಂ ಸಿದ್ದರಾಮಯ್ಯ ಬರ ಪ್ರವಾಸ: ಬೀದರ್, ಕಲಬುರ್ಗಿಗೆ ಭೇಟಿ

ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರತೆ ಹೆಚ್ಚಿದ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಗಳ ಪರಿಶೀಲನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on: 
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರತೆ ಹೆಚ್ಚಿದ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಗಳ ಪರಿಶೀಲನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ಬರ ಪ್ರವಾಸ ಕೈಗೊಂಡಿದ್ದಾರೆ. 
ಮೊದಲ ಹಂತದಲ್ಲಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಿಗೆ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. 
ಇಂದು ಬೀದರ್ ಮತ್ತು ಕಲಬುರ್ಗಿ ಭೇಟಿ ನೀಡಲಿರುವ ಸಿದ್ದರಾಮಯ್ಯ ಬರ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದ ನಂತರ ಅಲ್ಲಿನ ಉಪ ಆಯುಕ್ತರು ಮತ್ತು ಜಿಲ್ಲಾ ಪಂಚಾಯತ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. 
ಬರ ಪರಿಹಾರ ನಿರ್ವಹಣೆಯ ಸವಾಲು ನಿಭಾಯಿಸಲು ಕಂದಾಯ ವಿಭಾಗವಾರು ತಲಾ ನಾಲ್ವರು ಸಚಿವರನ್ನು ಒಳಗೊಂಡ ಸಚಿವ ಸಂಪುಟ ಸಮಿತಿಗಳನ್ನು ರಚಿಸಿದ್ದು, ಈ ತಂಡಗಳು ಇಂದಿನಿಂದಲೇ ಎಲ್ಲಾ ಜಿಲ್ಲೆಗಳಿಗೆ ತೆರಳಿ ಸ್ಥಳ ಪರಿಶೀಲನೆ ಮಾಡಲಿದ್ದಾರೆ. 
ಬೀದರ್ ನಲ್ಲಿ ಒಟ್ಟು 661 ಹಳ್ಳಿಗಳಿದ್ದು, ಅದರಲ್ಲಿ 373 ಹಳ್ಳಿಗಳ ನೀರಿನ ಸಮಸ್ಯೆ ಎದುರಿಸುತ್ತಿವೆ. ಈಗಾಗಲೇ ಅದಿಕಾರಿಗಳು 14 ಹಳ್ಳಿಗಳಿಗೆ ಟ್ಯಾಂಕ್ ಮೂಲಕ ನೀರು ಪೂರೈಕೆ ಮಾಡುತ್ತಿದ್ದಾರೆ. ಇನ್ನುಳಿದ ಹಳ್ಳಿಗಳಿಗೆ ವಾರದಲ್ಲಿ ಒಂದು ಬಾರಿ ನೀರು ಬಿಡಲಾಗುತ್ತಿದೆ.
ಇನ್ನು ಕಲಬುರ್ಗಿಯಲ್ಲಿ ಇದೇ ಪರಿಸ್ಥಿತಿ ಎದುರಾಗಿದೆ. 5,875 ಕೊಳವೆ ಬಾವಿಗಳಿದ್ದು, ಅದರಲ್ಲಿ 2,674 ಬಾವಿಗಳಲ್ಲಿ ನೀರಿಲ್ಲ. 714 ಬೋರ್ ವೆಲ್ ಗಳಲ್ಲಿ ಕೇವಲ 245 ಬೋರ್ ವೆಲ್ ಗಳು ಕಾರ್ಯನಿರ್ಹವಹಿಸುತ್ತಿದೆ. 1,269 ಹಳ್ಳಿಗಳಿದ್ದು, 491 ಹಳ್ಳಿಗಳು ನೀರಿನ ಸಮಸ್ಯೆ ಎದುರಿಸುತ್ತಿವೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com