ಬೆಳಗ್ಗೆ 6 ಗಂಟೆ ಸುಮಾರಿಗೆ ಬೆಂಗಳೂರಿನ ಮಾರತಹಳ್ಳಿ ಬಳಿಯ ಪೂರ್ವ ಫೌಂಟೈನ್ ಸ್ಕೈರ್ ಅಪಾರ್ಟ್‌ಮೆಂಟ್‌ನ 9ನೇ ಮಹಡಿಯಿಂದ ಅಂಕಿತ ಸೋನಿ ಕೆಳಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೊಲಂಬಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಂಕಿತ ಸಾವನ್ನಪ್ಪಿದ್ದಾರೆ. ಸದ್ಯ ಸೋನಿ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಇಡಲಾಗಿದೆ.