ಕೇಂದ್ರ ಪಿಎಫ್ ನೀತಿ ವಿರೋಧಿಸಿ ಬೆಂಗಳೂರಿನಲ್ಲಿ ಮತ್ತೆ ಕಾರ್ಮಿಕರ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಭವಿಷ್ಯ ನಿಧಿ(ಪಿಎಫ್)ನೀತಿಯನ್ನು ಖಂಡಿಸಿ ಮತ್ತೆ ಸಾವಿರಾರು ಕಾರ್ಮಿಕರು ಬೀದಿಗಿಳಿದು...
ಕೇಂದ್ರ ಸರ್ಕಾರ ನೀತಿ ವಿರೋಧಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಕಾರ್ಮಿಕರು
ಕೇಂದ್ರ ಸರ್ಕಾರ ನೀತಿ ವಿರೋಧಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಕಾರ್ಮಿಕರು
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಭವಿಷ್ಯ ನಿಧಿ(ಪಿಎಫ್)ನೀತಿಯನ್ನು ಖಂಡಿಸಿ ಮತ್ತೆ ಸಾವಿರಾರು ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. 
ಪ್ರತಿಭಟನೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಗಾರ್ಮೆಂಟ್ಸ್ ಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಗಾರ್ಮೆಂಟ್ಸ್ ಗಳ ಬಳಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಯಾರೂ ಗಾರ್ಮೆಂಟ್ಸ್ ಗಳಿಗೆ ಬರದಂತೆ ಪೊಲೀಸರು ತಡೆಯುತ್ತಿದ್ದಾರೆ. ಬೆಂಗಳೂರಿನ ಸುತ್ತಾಮುತ್ತಾ ಕಾರ್ಮಿಕರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಟ್ರಾಫಿಕ್ ಜಾಮ್ ಹೆಚ್ಚಾಗಿದ್ದು, ಜನರು ಪರದಾಡುತ್ತಿದ್ದಾರೆ. 
ಹೊಸೂರು ರಸ್ತೆ, ಮೈಸೂರು ರಸ್ತೆ, ತುಮಕೂರು ರಸ್ತೆ, ಸರ್ಜಾಪುರ ರಸ್ತೆ ಸುತ್ತಮುತ್ತಲಲ್ಲಿ ಹೆಚ್ಚಿನ ಮಟ್ಟದಲ್ಲಿ ಪೊಲೀಸರು ನಿಯೋಜಿಸಲಾಗಿದೆ. ಇಂದು ಬೆಳಗ್ಗಿನಿಂದ ಕೋಡಿ ಚಿಕ್ಕನಹಳ್ಳಿಯಲ್ಲಿ, ಜಾಲಹಳ್ಳಿ ಕ್ರಾಸ್ ಬಳಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಜಾಪುರ ರಸ್ತೆಯ ಬೆಳ್ಳಂದೂರು ಗೇಟ್ ಬಳಿ ಪ್ರತಿಭಟನಾನಿರತರಿಂದ ಕಲ್ಲು ತೂರಾಟ ನಡೆದಿದೆ. ಈ ವೇಳೆ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ, 
ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಜಾರ್ಜ್ ಮಾಡಿದ್ದು, ಐವರನ್ನು ಬಂಧಿಸಿದ್ದಾರೆ. ಇನ್ನು ಮೈಸೂರು ರಸ್ತೆಯಲ್ಲಿ ಕಾರ್ಮಿಕರು ಬೃಹತ್ ಪ್ರತಿಭಟನೆ ಕೈಗೊಂಡಿದ್ದು, ಸಿರಸಿ ಸರ್ಕಲ್ ನಿಂದ ಫ್ರಿಡಂ ಪಾರ್ಕ್ ವರೆಗೆ ರ್ಯಾಲಿ ಹಮ್ಮಿಕೊಂಡಿದ್ದಾರೆ. 
ತುಮಕೂರು ರಸ್ತೆಯಲ್ಲಿ ಕಾರ್ಮಿಕರು ನಡು ರಸ್ತೆಯಲ್ಲೇ ಕುಳಿತು ಧರಣಿ ನಡೆಸುತ್ತಿದ್ದಾರೆ. ಇದರಿಂದಾಗಿ ಸಂಚಾರ ಅಸ್ತವ್ಯಸ್ಥವಾಗಿದೆ ಎಂದು ತಿಳಿದು ಮೂಲಗಳು ತಿಳಿಸಿವೆ. 
ನಿನ್ನೆಯಿಂದ ಕಾರ್ಮಿಕರು ಕೇಂದ್ರ ಸರ್ಕಾರದ ಪಿಎಫ್ ನೀತಿ ವಿರುದ್ಧ ಬಹೃತ್ ಪ್ರತಿಭಟನೆ ನಡೆಸಿದ್ದರು. ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com