ಬೆಂಗಳೂರಿನಲ್ಲಿ ಅಗ್ನಿ ಆಕಸ್ಮಿಕ: ಹೊತ್ತಿ ಉರಿದ ಆಯಿಲ್ ಫ್ಯಾಕ್ಟರಿ

ಬೆಂಗಳೂರಿನ ಮಾಗಡಿ ರಸ್ತೆಯ ಸೀಗೆಹಳ್ಳಿ ಗೇಟ್ ಬಳಿ ಇರುವ ಲಕ್ಷ್ಮಿ ಕೆಮಿಕಲ್ಸ್ ನ ಆಯಿಲ್ ಫ್ಯಾಕ್ಟರಿಯಲ್ಲಿ ಶುಕ್ರವಾರ ಭಾರಿ ಅಗ್ನಿ ಅವಘಡ...
ಆಯಿಲ್ ಫಾಕ್ಟರಿ
ಆಯಿಲ್ ಫಾಕ್ಟರಿ
ಬೆಂಗಳೂರು: ಬೆಂಗಳೂರಿನ ಮಾಗಡಿ ರಸ್ತೆಯ ಸೀಗೆಹಳ್ಳಿ ಗೇಟ್ ಬಳಿ ಇರುವ ಲಕ್ಷ್ಮಿ ಕೆಮಿಕಲ್ಸ್ ನ ಆಯಿಲ್ ಫ್ಯಾಕ್ಟರಿಯಲ್ಲಿ ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಮತ್ತು ಓರ್ವ ಮಹಿಳೆ ಫ್ಯಾಕ್ಟರಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇಂದು ಬೆಳಗ್ಗೆ ಆಯಿಲ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಗೊಂಡವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ 8 ಅಗ್ನಿಶಾಮಕ ವಾಹನಗಳು ಆಗಿಮಿಸಿದ್ದು, ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com