ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣ: ಆರೋಪಿಗಳಿಗೆ ಜಾಮೀನು ನಿರಾಕರಣೆ

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ಪ್ರಮುಖ ಆರೋಪಿ ವೈ ಅಶ್ವಿನ್ ರಾವ್ ಮತ್ತು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ಪ್ರಮುಖ ಆರೋಪಿ ವೈ ಅಶ್ವಿನ್ ರಾವ್ ಮತ್ತು ಮೂವರು ಆರೋಪಿಗಳಿಗೆ ಜಾಮೀನು ನೀಡಲು ಲೋಕಾಯುಕ್ತ ವಿಶೇಷ ನ್ಯಾಯಾಲಯ ನಿರಾಕರಿಸಿದೆ.
ಮಾಜಿ ಲೋಕಾಯುಕ್ತ ನ್ಯಾ.ವೈ ಭಾಸ್ಕರ ರಾವ್ ಪುತ್ರ ವೈ ಅಶ್ವಿನ್, ವಿ ಭಾಸ್ಕರ್, ಎನ್ ನರಸಿಂಹ ಮೂರ್ತಿ ಹಾಗೂ ಹೊಟ್ಟೆ ಕೃಷ್ಣನಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. 
ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದ್ದನ್ನು ರದ್ದುಪಡಿಸಿದ್ದ ಸುಪ್ರೀಂಕೋರ್ಟ್, ವಿಚಾರಣಾ ನ್ಯಾಯಾಲಯದಲ್ಲಿ ಹೊಸತಾಗಿ ಜಾಮೀನು ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಮತ್ತೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. 
ಲೋಕೋಪಯೋಗಿ ಇಲಾಖೆ ಮುಖ್ಯ ಎಂಜಿನಿಯರ್ ಉದಯ ಶಂಕರ್ ನೀಡಿದ್ದ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಶ್ವಿನ್, ಭಾಸ್ಕರ್ ಮತ್ತು ನರಸಿಂಹ ಮೂರ್ತಿಗೆ ರು.5 ಲಕ್ಷ ನೀಡಿದ್ದೇನೆ ಎಂದು ಶಂಕರ್ ಆರೋಪಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com