ಬರ ಪರಿಹಾರ ಕಾರ್ಯವನ್ನು ಎಚ್ಚರಿಕೆಯಿಂದ ನಿರ್ವಹಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಸಂಭವಿಸಿರುವ ಬರಗಾಲ ಪರಿಸ್ಥಿತಿ ನಿರ್ವಹಣೆ ಕುರಿತು ಪ್ರತಿದಿನ ಅಧಿಕಾರಿಗಳು ಪರಿಶೀಲನೆ ನಡೆಸಿ, ಪರಿಹಾರ ಹಣ ದುರುಪಯೋಗವಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕೆಂದು...
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿರುವ ಬರಗಾಲ ಪರಿಸ್ಥಿತಿ ನಿರ್ವಹಣೆ ಕುರಿತು ಪ್ರತಿದಿನ ಅಧಿಕಾರಿಗಳು ಪರಿಶೀಲನೆ ನಡೆಸಿ, ಪರಿಹಾರ  ಹಣ ದುರುಪಯೋಗವಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಬರ ಪೀಡಿತ ರಾಜ್ಯಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದರು. ಇದರಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಬರ ನಿರ್ವಹಣೆ ಕುರಿತು ಅಧಿಕಾರಿಗಳ ಜತೆ ನಿನ್ನೆ ಸಭೆ ನಡೆಸಿದ್ದಾರೆ.

ಸಭೆ ವೇಳೆ ಬರ ಪರಿಸ್ಥಿತಿ ಕುರಿತಂತೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿರುವ ಅವರು, ಬರ ನಿರ್ವಹಣೆ ಕುರಿತು ಪ್ರತಿ ದಿನ ಪರಿಶೀಲನೆ ನಡೆಸಬೇಕು. ಬರ ಹೆಸರಿನಲ್ಲಿ ಹಣ ದುರುಪಯೋಗವಾಗದಂತೆ ಎಚ್ಚರಿಕೆ ವಹಿಸಬೇಕು. ಒಂದು ವೇಳೆ ಪರಿಹಾರ ನಿರ್ವಹಣೆಯಲ್ಲಿ ತಪ್ಪುಗಳು ಕಂಡುಬಂದರೆ ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರೇ ಹೊಣೆಯಾಗಲಿದ್ದಾರೆಂದು ಕಟ್ಟುನಿಟ್ಟುನ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಇಲ್ಲವೇ ಇಲ್ಲವೆಂದು ನಾನು ಹೇಳಿಲ್ಲ. ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ. ಮಹಾರಾಷ್ಟ್ರದಲ್ಲಿ ಇರುವಷ್ಟು ತೀವ್ರ ಪ್ರಮಾಣದಲ್ಲಿ ಇಲ್ಲ ಎಂದಷ್ಟೇ ಹೇಳಿದ್ದೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com