ಕೊಪ್ಪಳ ಬಳಿ ಟಂಟಂ - ಲಾರಿ ಮುಖಾಮುಖಿ ಡಿಕ್ಕಿ: 11 ಮಂದಿ ಸ್ಥಳದಲ್ಲೇ ಸಾವು

ಕೊಪ್ಪಳ ಬಳಿ ಲಾರಿ ಹಾಗೂ ಟಂಟಂ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದ ಲಾರಿ ಚಾಲಕ ಸೇರಿದಂತೆ 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಕೊಪ್ಪಳ: ಕೊಪ್ಪಳ ಬಳಿ ಲಾರಿ ಹಾಗೂ ಟಂಟಂ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಟಂಟಂ ಚಾಲಕ ಸೇರಿದಂತೆ 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೊಪ್ಪಳ ಗ್ರಾಮಾಂತ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಟಂಟಂ ಕೊಪ್ಪಳದಿಂದ ಕುಕನೂರಿಗೆ ತೆರಳುತ್ತಿದ್ದ ವೇಳೆ ಹಳಗೇರಿ ಬಳಿ ಭೀಕರ ಅಪಘಾತ ಸಂಭವಿಸಿದೆ. ಗಾಯಗೊಂಡವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತಪಟ್ಟವರೆಲ್ಲ ಕುಕನೂರು ಗ್ರಾಮದ ನಿವಾಸಿಗಳಾಗಿದ್ದು, ಕೊಪ್ಪಳದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಊಟ ಬಡಿಸಲು ಬಂದಿದ್ದ ಕಾರ್ಮಿಕರು, ವಾಪಸ್ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com