ಅವೆನ್ಯೂ ರಸ್ತೆಯ ದರ್ಗಾ ಮೈದಾನದಲ್ಲಿ ಹಬ್ಬಿದ್ದ ಬೆಂಕಿಯನ್ನು ನಂದಿಸುತ್ತಿರುವ ಅಗ್ನಿ ಶಾಮಕ ಸಿಬ್ಬಂದಿ
ರಾಜ್ಯ
ಬೆಂಗಳೂರಿನಲ್ಲಿ ಮತ್ತೆ ಅಗ್ನಿ ಆಕಸ್ಮಿಕ, ಆ್ಯಪಲ್ ಪೆಟ್ಟಿ ಗೋದಾಮಿನಲ್ಲಿ ಬೆಂಕಿ
ಬೆಂಗಳೂರಿನಲ್ಲಿ ಮತ್ತೆ ಅಗ್ನಿ ಅವಘಡ ಸಂಭವಿಸಿದ್ದು, ಅವೆನ್ಯೂ ರಸ್ತೆಯ ಆ್ಯಪಲ್ ಪೆಟ್ಟಿ ಗೋದಾಮಿಗೆ ಬೆಂಕಿ ತಗುಲಿದೆ...
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಅಗ್ನಿ ಅವಘಡ ಸಂಭವಿಸಿದ್ದು, ಅವೆನ್ಯೂ ರಸ್ತೆಯ ಆ್ಯಪಲ್ ಪೆಟ್ಟಿ ಗೋದಾಮಿಗೆ ಬೆಂಕಿ ತಗುಲಿದೆ.
ಅವೆನ್ಯೂ ರಸ್ತೆಯ ದರ್ಗಾ ಮೈದಾನದಲ್ಲಿ ಶೆಡ್ ಮಾದರಿ ನಿರ್ಮಿಸಿರುವ ಗೋದಾಮಿನಲ್ಲಿ ಇಂದು ಬೆಳಗ್ಗೆ ಸುಮಾರು 5.30ರ ಸುಮಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿ ಅಕ್ಕಪಕ್ಕದ ಕಟ್ಟಡಗಳಿಗೆ ವ್ಯಾಪಿಸಿದೆ. ದರ್ಗಾ ಪಕ್ಕದಲ್ಲೇ ಇರುವ ಕೆಲ ಮನೆಗಳಿಗೂ ಬೆಂಕಿ ವ್ಯಾಪಿಸಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಐದು ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಹಣ್ಣುಗಳನ್ನು ಪ್ಯಾಕ್ ಮಾಡುವ ಆ್ಯಪಲ್ ಪೆಟ್ಟಿಯ ಮರದ ರಟ್ಟುಗಳನ್ನು ಇಲ್ಲಿ ಶೇಖರಿಸಡಲಾಗಿತ್ತು. ಈ ಹಿನ್ನಲೆಯಲ್ಲಿ ಬೆಂಕಿ ವ್ಯಾಪಕವಾಗಿ ಹರಡಿದೆ ಎಂದು ಹೇಳಲಾಗುತ್ತಿದೆ. ಅಗ್ನಿ ಅನಾಹುತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದ್ದರೂ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ