ವಿದ್ಯುತ್ ಕೊರೆತೆಯಿಲ್ಲ: ಸಚಿವ ಡಿ.ಕೆ. ಶಿವಕುಮಾರ್

ಬರಗಾಲವಿದ್ದರೂ ಬರ ಪೀಡಿತ ಪ್ರದೇಶಗಳಿಲ್ಲಿ ವಿದ್ಯುತ್ ಕೊರತೆಯಿಲ್ಲ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ...
ಇಂಧನ ಸಚಿವ ಡಿ.ಕೆ. ಶಿವಕುಮಾರ್
ಇಂಧನ ಸಚಿವ ಡಿ.ಕೆ. ಶಿವಕುಮಾರ್
Updated on: 

ಬೆಂಗಳೂರು: ಬರಗಾಲವಿದ್ದರೂ ಬರ ಪೀಡಿತ ಪ್ರದೇಶಗಳಿಲ್ಲಿ ವಿದ್ಯುತ್ ಕೊರತೆಯಿಲ್ಲ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.

ಬರಪೀಡಿತ ಪ್ರದೇಶದ ಜನರು ಈಗಾಗಲೇ ನೀರಿನ ಸಮಸ್ಯೆಯಿಂದ ಕಂಗೆಟ್ಟಿದ್ದು, ಇದೀಗ ಜನರಿಗೆ ವಿದ್ಯುತ್ ಸಮಸ್ಯೆ ಎದುರಾಗಿದೆ ಎಂಬ ಸುದ್ದಿಗಳು ಕೇಳಿಬಂದಿತ್ತು.

ನಿನ್ನೆ ಇಂಧನ ಸಚಿವಾಲಯದ ಅಧಿಕಾರಿಗಳೊಂದಿಗೆ ಕಡೂರಿಗೆ ಭೇಟಿ ನೀಡಿ ಡಿ.ಕೆ. ಶಿವಕುಮಾರ್ ಅವರು ಜೆಡಿ(ಎಸ್) ಶಾಸಕ ಎಸ್.ವಿ. ದತ್ತಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ ವಿದ್ಯುತ್ ಪೂರೈಕೆ ಕುರಿತಂತೆ ದತ್ತಾ ಅವರಿಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ. ಅಲ್ಲದೆ, ಮೂರು ಉಪ ಸೇವಾ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಭರವಸೆಯನ್ನು ನೀಡಿದ್ದಾರೆಂದು ತಿಳಿದುಬಂದಿದೆ.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಬರಪೀಡಿತ ಪ್ರದೇಶಗಳಲ್ಲಿ ವಿದ್ಯುತ್ ಕೊರತೆಯಿಲ್ಲ. ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಮನವಿ ಬಂದ 24 ಗಂಟೆಗಳೊಳಗಾಗಿ ವಿದ್ಯುತ್ ಸಂಪರ್ಕವನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com