ಬರ ಪರಿಹಾರಕ್ಕೆ ರು.25 ಲಕ್ಷ ನೀಡಲು ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧಾರ

ರಾಕಿಂಗ್ ಸ್ಟಾರ್ ಯಶ್ ಅವರು ಬರ ಪೀಡಿತ ಪ್ರದೇಶಗಳಿಗೆ ಕುಡಿಯುವ ನೀರಿನ ಪೂರೈಕೆ ಕೆಲಸ ಆರಂಭಿಸಿದ ಬೆನ್ನಲ್ಲೇ, ಕರ್ನಾಟ ಚಲನಚಿತ್ರ...
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ
Updated on: 
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರು ಬರ ಪೀಡಿತ ಪ್ರದೇಶಗಳಿಗೆ ಕುಡಿಯುವ ನೀರಿನ ಪೂರೈಕೆ ಕೆಲಸ ಆರಂಭಿಸಿದ ಬೆನ್ನಲ್ಲೇ, ಕರ್ನಾಟ ಚಲನಚಿತ್ರ ವಾಣಿಜ್ಯ ಮಂಡಳಿ ಬರ ಪೀಡಿತ ಜನರ ನೆರವಿಗೆ ಮುಂದಾಗಿದೆ. 
ಬರಗಾಲದ ಬಿಸಿಗೆ ತತ್ತರಿಸಿರುವ ಉತ್ತರ ಕರ್ನಾಟಕದ ಜನತೆಗೆ ನೀರು ಪೂರೈಸಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರು.25 ಲಕ್ಷ ಹಣವನ್ನು ನೀಡಲು ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದಾಗಿದೆ. 
ಶನಿವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೆಎಫ್ ಸಿಸಿ ಅಧ್ಯಕ್ಷ ಸಾರಾ ಗೋವಿಂದ್ ಅವರು ಮಾತನಾಡಿ, ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿ ಜನರು ಸಂಕಷ್ಟದಲ್ಲಿ ಪರಿಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ವಾಣಿಜ್ಯ ಮಂಡಳಿ ನೆರವು ನೀಡಲು ಮುಂದಾಗಿದೆ ಎಂದು ತಿಳಿಸಿದ್ದಾರೆ. 
ಅಷ್ಟೇ ಅಲ್ಲದೇ, ವಿತರಕರು ಮತ್ತು ಚಿತ್ರಮಂದಿರದ ಮಾಲೀಕರನ್ನು ಒಂದು ದಿನದ ಆದಾಯವನ್ನು ಬರ ಪೀಡಿತರಿಗೆ ನೀಡುವಂತೆ ಮನವಿ ಮಾಡಲಾಗತ್ತದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com