ಭೂ ಕುಸಿತದ ಚಿತ್ರ
ರಾಜ್ಯ
ಮೆಟ್ರೊ ಸುರಂಗ ಮಾರ್ಗದ ಬಳಿ ಭೂ ಕುಸಿತ: ಕೆಂಪೇಗೌಡ ರಸ್ತೆಯಲ್ಲಿ ಆತಂಕ
ಬೆಂಗಳೂರಿನ ಕೆ.ಜಿ.ರಸ್ತೆಯಲ್ಲಿ ಮೆಟ್ರೊ ಸುರಂಗ ಮಾರ್ಗದ ಬಳಿ ಮಂಗಳವಾರ ಭೂಕುಸಿತ ಉಂಟಾಗಿದ್ದು, ಸ್ಥಳೀಯರು ಹಾಗೂ ಬಿಎಂಆರ್ ಸಿಎಲ್...
ಬೆಂಗಳೂರು: ಬೆಂಗಳೂರಿನ ಕೆ.ಜಿ.ರಸ್ತೆಯಲ್ಲಿ ಮೆಟ್ರೊ ಸುರಂಗ ಮಾರ್ಗದ ಬಳಿ ಮಂಗಳವಾರ ಭೂಕುಸಿತ ಉಂಟಾಗಿದ್ದು, ಸ್ಥಳೀಯರು ಹಾಗೂ ಬಿಎಂಆರ್ ಸಿಎಲ್ ಅಧಿಕಾರಿಗಳು ಆತಂಕಗೊಂಡಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಅಡಿಗಾಸ್ ಹೋಟೆಲ್ ಬಳಿ ಮೆಟ್ರೋ ಸುರಂಗದ ಸಮೀಪವೇ ಈ ಕುಸಿತ ಉಂಟಾಗಿದ್ದು, ಮೆಟ್ರೋ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಸುಮಾರು 6 ಅಡಿ ಭೂ ಕುಸಿತವಾಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಸ್ಥಳಕ್ಕೆ ಬಿಬಿಎಂಪಿ ಹಾಗೂ ಮೆಟ್ರೋ ನಿಗಮದ ಅಧಿಕಾರಿಗಳು ಭೇಟಿ ನೀಡಿ, ಬ್ಯಾರಿಕೇಡ್ ಅಳವಡಿಸಿ, ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಿದ್ದಾರೆ. ಅಲ್ಲದೆ ಆ ಗುಂಡಿಗೆ ಕಾಂಕ್ರಿಟ್ ತುಂಬುವ ಕೆಲಸ ಮಾಡಲಾಗುತ್ತಿದೆ.
ಭೂಕುಸಿತಕ್ಕೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಭೂಕುಸಿತದಿಂದ ಮೆಟ್ರೋ ಸಂಚಾರಕ್ಕೆ ಯಾವುದೇ ಅಡಚಣೆಯಾಗಿಲ್ಲ. ಆದರೂ ಸುರಂಗ ಮಾರ್ಗದ ಸಮೀಪವೇ ಇದು ನಡೆದಿರುವುದರಿಂದ ಪರಿಶೀಲನೆ ನಡೆಸಿ, ಇಂತಹ ಘಟನೆ ಮರುಕಳಿಸದಂತೆ ಕ್ರಮಕೊಳ್ಳಲಾಗುವುದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ