ಚಿಕ್ಕಮಗಳೂರು: ಖಾಸಗಿ ಶಾಲಾ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಓರ್ವ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ಮತ್ತು 10ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರ ಬಳಿಯ ನಾರಾಯಣಪುರ ಗೇಟ್‌ನಲ್ಲಿ ನಡೆದಿದೆ.
ಮೃತ ಬಾಲಕನನ್ನು ಪ್ರೀತಂ (4) ಎಂದು ಗುರುತಿಸಲಾಗಿದೆ. ಈತ ಹಿರೇನಲ್ಲೂರಿನ ಪ್ರಮೋದ್ ಎಂಬುವರ ಮಗನಾಗಿದ್ದಾನೆ. ಬಸ್‌ನಲ್ಲಿ 25ಕ್ಕೂ ಹೆಚ್ಚು ಶಾಲಾ ಮಕ್ಕಳು ಪ್ರಯಾಣ ಮಾಡುತ್ತಿದ್ದರು. ಘಟನೆಯಿಂದ 15ಕ್ಕೂ ಹೆಚ್ಚು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮೂರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಮಕ್ಕಳನ್ನು ತರೀಕೆರೆ ಮತ್ತು ಅಜ್ಜಂಪುರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯಗೊಂಡ ಓರ್ವ ವಿದ್ಯಾರ್ಥಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.