ಧರ್ಮಸ್ಥಳ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ: ಆರೋಪಿಗೆ ಜಾಮೀನು ನಿರಾಕರಣೆ

2012 ರಲ್ಲಿ ಧರ್ಮಸ್ಥಳದ 17 ವರ್ಷದ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ಜಾಮೀನು ಅರ್ಜಿಯನ್ನು ಸಿಟಿ ಸಿವಿಲ್ ಯಯ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: 2012 ರಲ್ಲಿ ಧರ್ಮಸ್ಥಳದ 17 ವರ್ಷದ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ಜಾಮೀನು ಅರ್ಜಿಯನ್ನು ಸಿಟಿ ಸಿವಿಲ್ ಕೋರ್ಟ್ ವಜಾ ಗೊಳಿಸಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿ ವಜಾಗೊಳಿಸಿದ ಸಿಟಿ ಸಿವಿಲ್ ಕೋರ್ಟ್ ಜಡ್ಜ್ ವಿನೀತಾ ಪಿ. ಶೆಟ್ಟಿ, ಆರೋಪಿಗೆ ಜಾಮೀನು ನೀಡಿದರೆ. ತನಿಖೆಗೆ ಹಿನ್ನಡೆಯಾಗುವ ಸಾಧ್ಯತೆ, ಆರೋಪಿ ತನಿಖೆಗೆ ಅಡ್ಡಿ ಪಡಿಸಬಹುದು, ಜಾಮೀನು ನೀಡಿದರೆ ಸಮಾಜದ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿನಿಯ ಅತ್ಯಾಚಾರದ ನಂತರ ಆಕೆಯ ಹಲವು ವಸ್ತುಗಳನ್ನು ಸಿಬಿಐ ಪೊಲೀಸರು ವಶಕ್ಕೆ ಪಡೆದು ಕೊಂಡು ತನಿಖೆ ನಡೆಸುತ್ತಿದ್ದಾರೆ.  ಆರೋಪಿಯ ಮಾನಸಿಕ ಆರೋಗ್ಯ ಸ್ಥಿತಿ ಸರಿಯಿಲ್ಲ ಎಂದು ಎಲ್ಲರಿಗೂ ತಿಳಿದಿದೆ. ಹೀಗಾಗಿ ವೈದ್ಯರ ಪ್ರಮಾಣ ಪತ್ರದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ಅಕ್ಟೋಬರ್ 9 2012 ರಂದು ಕಾಲೇಜಿಗೆ ಹೋಗಿದ್ದ ಸೌಜನ್ಯ ವಾಪಸ್ ಬಂದಿರಲಿಲ್ಲ. ಈ ಸಂಬಂದ ತಂದೆ  ಚಂದ್ರಪ್ಪಗೌಡ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಿತ್ತು. ಸಾರ್ವಜನಿಕರ ತೀವ್ರ ಪ್ರತಿಭಟನೆ ನಂತರ ಸೌಜನ್ಯ ಪ್ರಕರಣವನ್ನು ಸಿಬಿಐ  ವಹಿಸಲಾಯಿತು.


ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com