ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ
ರಾಜ್ಯ
ರಾಜಕಾಲುವೆ ತೆರವು: ಮನೆ ಕಳೆದುಕೊಂಡವರಿಗೆ ಪುನರ್ವಸತಿ ಕಲ್ಪಿಸಲು ಮಾನವ ಹಕ್ಕು ಆಯೋಗದ ಸೂಚನೆ
ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಭಾಗವಾಗಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಯನ್ನು ನೆಲಸಮಗೊಳಿಸುತ್ತಿರುವ ಬಗ್ಗೆ ರಾಜ್ಯ ಮಾನವ ಹಕ್ಕು ಆಯೋಗ ಬಿಬಿಎಂಪಿಗೆ ಪತ್ರ ಬರೆದಿದೆ.
ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಭಾಗವಾಗಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಯನ್ನು ನೆಲಸಮಗೊಳಿಸುತ್ತಿರುವ ಬಗ್ಗೆ ರಾಜ್ಯ ಮಾನವ ಹಕ್ಕು ಆಯೋಗ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಪತ್ರ ಬರೆದಿದೆ.
ತೆರವು ಕಾರ್ಯಾಚರಣೆ ನಡೆಸುವುದಕ್ಕೂ ಮುನ್ನ ರಾಜಕಾಲುವೆ ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿರುವವರಿಗೆ ನೋಟಿಸ್ ಜಾರಿ ಮಾಡಿ, ಅದರೊಂದಿಗೆ ತೆರವು ಕಾರ್ಯಾಚರಣೆಯಿಂದ ಮನೆಗಳನ್ನು ಕಳೆದುಕೊಳ್ಳುವವರಿಗೆ ಸೂಕ್ತ ಪುನರ್ವಸತಿ ಕಲ್ಪಿಸಿ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಮಾನವ ಹಕ್ಕು ಆಯೋಗ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ರಾಜಕಾಲುವೆ ತೆರವುಗೊಳಿಸುತ್ತಿರುವುದರಿಂದ ಹಲವಾರು ನಿರಾಶ್ರಿತರಾಗಿರುವುದರ ಬಗ್ಗೆ ಟಿ ನರಸಿಂಹ ಮೂರ್ತಿ ಎಂಬುವವರು ಮಾನವ ಹಕ್ಕು ಆಯೋಗಕೆ ಪತ್ರ ಬರೆದಿದ್ದರು. ಈ ಬೆನ್ನಲ್ಲೇ ಮಾನವ ಹಕ್ಕು ಆಯೋಗ ಸರ್ಕಾರಕ್ಕೆ ಸೂಕ್ತ ಪುನರ್ವಸತಿ ಕಲ್ಪಿಸುವಂತೆ ಸೂಚನೆ ನೀಡಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ