ಜಾಮೀನು ಹಿನ್ನೆಲೆ: ಮಹದಾಯಿ ಹೋರಾಟದಲ್ಲಿ ಭಾಗಿಯಾಗಿದ್ದ ರೈತರ ಬಿಡುಗಡೆ

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದ್ದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ಮಹದಾಯಿ ಹೋರಾಟಗಾರರನ್ನು ಬಿಡುಗಡೆ ಮಾಡಲಾಗಿದೆ.
ಜಾಮೀನು ಹಿನ್ನೆಲೆ: ಮಹದಾಯಿ ಹೋರಾಟದಲ್ಲಿ ಭಾಗಿಯಾಗಿದ್ದ ರೈತರ ಬಿಡುಗಡೆ
ಜಾಮೀನು ಹಿನ್ನೆಲೆ: ಮಹದಾಯಿ ಹೋರಾಟದಲ್ಲಿ ಭಾಗಿಯಾಗಿದ್ದ ರೈತರ ಬಿಡುಗಡೆ

ಧಾರವಾಡ/ ಚಿತ್ರದುರ್ಗ: ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದ್ದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ಮಹದಾಯಿ ಹೋರಾಟಗಾರರನ್ನು ಬಿಡುಗಡೆ ಮಾಡಲಾಗಿದೆ.

ಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪನ್ನು ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ನಡೆದ ಗಲಾಟೆಯಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಧಾರವಾಡ ಜಿಲ್ಲೆಯ  ನವಲಗುಂದ ತಾಲೂಕಿನ ರೈತರನ್ನು ಬಿಡುಗಡೆ ಮಾಡಲಾಗಿದೆ.

ಚಿತ್ರದುರ್ಗ ಜೈಲಿನಲ್ಲಿದ್ದ 57 ರೈತರನ್ನು ಹಾಗು ಬಳ್ಳಾರಿ ಜೈಲಿನಲ್ಲಿದ್ದ 129 ರೈತರನ್ನು ಬಿಡುಗಡೆ ಮಾಡಲಾಗಿದ್ದು, ಚಿತ್ರದುರ್ಗದಿಂದ ಧಾರವಾಡದ ನವಲಗುಂದಕ್ಕೆ ತೆರಳಲು ಚಿತ್ರದುರ್ಗದ ಮುರುಘಾ ಮಠದಿಂದ ರೈತರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.

ಬಂಧನಕ್ಕೊಳಗಾಗಿದ್ದ ರೈತರ ಪೈಕಿ ಓರ್ವ ರೈತ ಜಾಮೀನಿಗೆ ಅರ್ಜಿ ಸಲ್ಲಿಸಿರಲಿಲ್ಲವಾದ್ದರಿಂದ ಇಬ್ರಾಹಿಂ ಸಾಬ್ ಎಂಬ ರೈತನ ಬಿಡುಗಡೆ ವಿಳಂಬವಾಗಲಿದೆ ಎಂದು ಹೇಳಲಾಗುತ್ತಿದೆ.

ಮಹದಾಯಿ ನ್ಯಾಯಾಧಿಕರಣದ ತೀರ್ಪನ್ನು ವಿರೋಧಿಸಿ ಧಾರವಾಡ ಜಿಲ್ಲೆ, ಗದಗ ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆ ನಡೆದಿತ್ತು. ಈ ವೇಳೆ ಧಾರವಾಡದ ನವಲಗುಂದ ಮತ್ತು  ಯಮನೂರು ಗ್ರಾಮಗಳಲ್ಲಿ ಪೊಲೀಸರತ್ತ ಕಲ್ಲು ತೂರಾಟಾ, ಲಾಠಿ ಚಾರ್ಜ್ ನಂತಹ ಗಂಭೀರ ಪ್ರಕರಣಗಳು ನಡೆದಿದ್ದವು. ಈ ಹಿನ್ನಯಲ್ಲಿ ನವಲಗುಂದ ತಾಲ್ಲೂಕಿನಾದ್ಯಂತ ಕಾರ್ಯಾಚರಣೆ  ನಡೆಸಿದ್ದ ಪೊಲೀಸರು ಪ್ರತಿಭಟನೆ ಮತ್ತು ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಸುಮಾರು 180ಕ್ಕೂ ಅಧಿಕ ಮಂದಿ ರೈತರನ್ನು ಬಂಧಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com