ತೆಂಗು-ಅಡಿಕೆ ಬೆಲೆ ಕುಸಿತ: ಪಾದಯಾತ್ರೆಗೆ ರೈತರ ನಿರ್ಧಾರ

ತೆಂಗು-ಅಡಿಕೆ ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರು ಕನಿಷ್ಠ ಬೆಂಬಲ ಬೆಲೆ ಆಗ್ರಹಿಸಿ ಪಾದಯಾತ್ರೆ ನಡೆಸಲು ಶನಿವಾರ ತೀರ್ಮಾನಿಸಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ತೆಂಗು-ಅಡಿಕೆ ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರು ಕನಿಷ್ಠ ಬೆಂಬಲ ಬೆಲೆ ಆಗ್ರಹಿಸಿ ಪಾದಯಾತ್ರೆ ನಡೆಸಲು ಶನಿವಾರ ತೀರ್ಮಾನಿಸಿದ್ದಾರೆ.

ಬೆಲೆ ಕುಸಿತ ಕುರಿತಂತೆ ಸಭೆ ನಡೆಸಿ ಮಾತುಕತೆ ನಡೆಸಿರುವ ರೈತ ಸಂಘಟನೆಗಳು ಕನಿಷ್ಠ ಬೆಲೆ ನಿಗದಿಗೆ ಆಗ್ರಹಿಸಿ ಟಿಪ್ಟೂರಿನಿಂದ ವಿಧಾನಸೌಧ 140 ಕಿ.ಮೀ ವರೆಗೂ ಪಾದಯಾತ್ರೆ ನಡೆಸುವುದಾಗಿ ನಿರ್ಧಾರ ಕೈಗೊಂಡಿವೆ ಎಂದು ತಿಳಿದುಬಂದಿದೆ.

ಬೆಲೆ ಕುಸಿತದಿಂದಾಗಿ ಸಂಕಷ್ಟದಲ್ಲಿರುವ ರೈತ ಸಂಘಟನೆಗಳ ಮುಖಂಡರೊಂದಿಗೆ ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ ರೈತರ ಕಷ್ಟಗಳನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಪ್ರಧಾನಿ ಬಳಿ ನಿಯೋಗ ಕೊಂಡೊಯ್ಯುವುದಾಗಿ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com