ನಮ್ಮ ಸಿಬ್ಬಂದಿ ದೇಶ ವಿರೋಧಿ ಘೋಷಣೆ ಕೂಗಿಲ್ಲ: ಅಮ್ನೆಸ್ಟಿ

ಕಾಶ್ಮೀರ ವಿಚಾರ ಚರ್ಚೆ ವೇಳೆ ನಮ್ಮ ಯಾವುದೇ ಸಿಬ್ಬಂದಿ ದೇಶ ವಿರೋಧಿ ಘೋಷಣೆ ಕೂಗಿಲ್ಲ ಎಂದು ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ...
ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ಎಬಿವಿಪಿ ಪ್ರತಿಭಟನೆ
ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ಎಬಿವಿಪಿ ಪ್ರತಿಭಟನೆ
ಬೆಂಗಳೂರು: ಕಾಶ್ಮೀರ ವಿಚಾರ ಚರ್ಚೆ ವೇಳೆ ನಮ್ಮ ಯಾವುದೇ ಸಿಬ್ಬಂದಿ ದೇಶ ವಿರೋಧಿ ಘೋಷಣೆ ಕೂಗಿಲ್ಲ ಎಂದು ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಮಂಗಳವಾರ ಸ್ಪಷ್ಟಪಡಿಸಿದೆ.
ಎಬಿವಿಪಿ ಆರೋಪ ಆಧಾರ ರಹಿತ. ಶನಿವಾರ ನಡೆದ ಕಾರ್ಯಕ್ರಮದಲ್ಲಿ ಕೇವಲ ಕಾಶ್ಮೀರಿ ಸಂತ್ರಸ್ತರಿಗೆ ನ್ಯಾಯ ದೊರಕಿಸುವ ಕುರಿತು ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ಚರ್ಚಿಸಲಾಗಿದೆ ಎಂದು ಸಂಸ್ಥೆ ಹೇಳಿದೆ.
ನಿನ್ನೆ ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಿಶೇಷ ಕಾರ್ಯಾಗಾರದಲ್ಲಿ ಪ್ರಚೋದನಾತ್ಮಕ ಭಾಷಣ, ಆಜಾದಿ ಪರ ಘೋಷಣೆ ಮತ್ತು ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದ ಆರೋಪದ ಮೇಲೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ.
ಜಮ್ಮು ಹಾಗೂ ಕಾಶ್ಮೀರದಲ್ಲಿ ನಾಗರಿಕ ಹಕ್ಕುಗಳ ಉಲ್ಲಂಘನೆಯಿಂದ ನೋವು ಅನುಭವಿಸುತ್ತಿರುವವರಿಗೆ ಸ್ಪಂದಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ನಿತ್ಯ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುವ ವಿಷಯಗಳನ್ನೇ ಚರ್ಚೆ ಮಾಡಲಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಅಮ್ನೆಸ್ಟಿ ಭಾರತೀಯ ಸೇನೆ ವಿರುದ್ಧ ಆಜಾದಿ ಹೆಸರಿನಲ್ಲಿ ರಾಷ್ಟ್ರವಿರೋಧಿ ಘೋಷಣೆ ಕೂಗಿದ್ದು, ಆ ಸಂಸ್ಥೆಯನ್ನು ನಿಷೇಧಿಸಬೇಕು ಮತ್ತು ದೇಶ ವಿರುದ್ಧ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com