ತೆಂಗು ಮತ್ತು ಅಡಿಕೆ ಬೆಂಬಲ ಬೆಲೆ ಘೋಷಿಸದಿದ್ದರೇ ತೀವ್ರ ಹೋರಾಟದ ಎಚ್ಚರಿಕೆ

ಡಿಕೆ, ತೆಂಗು ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ಹಿತ ಕಾಪಾಡಲು ಕೇಂದ್ರ ಸರ್ಕಾರ ಮುಂದಾಗಿ ಬೆಂಬಲ ಬೆಲೆ ನೀಡದಿದ್ದರೇ ತೀವ್ರ ಹೋರಾಟ
ಅಡಿಕೆ ಮತ್ತು ತೆಂಗು ಬೆಳೆಗಳಿಗೆ ಬೆಂಬಲ ಸಂಬಂಧ ನಡೆದ ಸಭೆ
ಅಡಿಕೆ ಮತ್ತು ತೆಂಗು ಬೆಳೆಗಳಿಗೆ ಬೆಂಬಲ ಸಂಬಂಧ ನಡೆದ ಸಭೆ

ಬೆಂಗಳೂರು: ಅಡಿಕೆ, ತೆಂಗು ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ಹಿತ ಕಾಪಾಡಲು  ಕೇಂದ್ರ ಸರ್ಕಾರ ಮುಂದಾಗಿ ಬೆಂಬಲ ಬೆಲೆ ನೀಡದಿದ್ದರೇ ತೀವ್ರ ಹೋರಾಟ ನಡೆಸುವುದಾಗಿ ಅಡಿಕೆ ಮತ್ತು ತೆಂಗು ಬೆಳೆಗಾರರು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ `ಕೃಷ್ಣಾ’ದಲ್ಲಿ ನಡೆದ ಸಭೆಯಲ್ಲಿ  ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಅನಂತ ಕುಮಾರ್, ವಿಧಾನ ಮಂಡಲದ ಉಭಯ ಸದನಗಳ ವಿರೋಧ ಪಕ್ಷದ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ ಸೇರಿದಂತೆ ಅನೇಕ ರೈತ ಮುಖಂಡರುಗಳು ಸಭೆಯಲ್ಲಿ ಭಾಗವಹಿಸಿದ್ದರು.

ಅಡಿಕೆ ಮತ್ತು ತೆಂಗು ಬೆಳೆಗಾರರು ಸಂಕಷ್ಟ ಎದುರಿಸುತ್ತಿರುವುದರಿಂದ ಕೇಂದ್ರ ರಾಜ್ಯ ಸರ್ಕಾರಗಳು ಒಟ್ಟಾಗಿ ಬೆಳೆಗಾರರ ಹಿತ ಕಾಪಾಡಲು ನಿರ್ಧರಿಸಿದ್ದು, ಸದ್ಯದಲ್ಲೇ ಸಂಬಂಧಪಟ್ಟ ಕೇಂದ್ರ ಸಚಿವರನ್ನು ಮತ್ತೊಮ್ಮೆ ಭೇಟಿ ಮಾಡಿ ಮನವಿ ಸಲ್ಲಿಸಲು ಕೂಡ ನಿರ್ಧರಿಸಲಾಗಿದೆ.

ಅಡಿಕೆ ಮತ್ತು ತೆಂಗು ಬೆಳೆಗಾರರ ಜ್ವಲಂತ ಸಮಸ್ಯೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ತಾವು ಈಗಾಗಲೇ ಕೇಂದ್ರದ ಕೃಷಿ ಮತ್ತು ವಾಣಿಜ್ಯ ಸಚಿವರನ್ನು ಭೇಟಿ ಮಾಡಿ ಬೆಳೆಗಾರರ ನೆರವಿಗೆ ಬರುವಂತೆ ಮನವಿ ಮಾಡಲಾಗಿದೆ. ರಾಜ್ಯ ಸರ್ಕಾರ ಕೂಡ ರೈತರ ನೆರವಿಗೆ ಬರುವುದಾಗಿ ಹೇಳಿದೆ. ಒಟ್ಟಾರೆ ಕೇಂದ್ರದ ಮೇಲೆ ಒತ್ತಡ ಹೇರಲು ನಿರ್ಧರಿಸಲಾಗಿದೆ ಎಂದು ಹೇಳಿದರು.
.
ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಮಾತನಾಡಿ, ರಾಜ್ಯ ಸರ್ಕಾರ ಅಡಿಕೆ ಮತ್ತು ತೆಂಗು ಬೆಳೆಗಾರರ ರಕ್ಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ. ಅವರೂ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಎಲ್ಲರ ಜತೆ ಸೇರಿ ಕೇಂದ್ರದ ಮೇಲೆ ಒತ್ತಡ ಹಾಕೋಣ ಎಂದು ಹೇಳಿದ್ದಾರೆ ಎಂದರು.ಕೇಂದ್ರ ಸಚಿವ ಅನಂತ ಕುಮಾರ್, ಕೋಡಿಹಳ್ಳಿ ಚಂದ್ರಶೇಖರ್, ಸಚಿವರಾದ ಜಯಚಂದ್ರ, ಮಹದೇವ ಪ್ರಸಾದ್ ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com