ಬೆಂಗಳೂರು: ಕಾಶ್ಮೀರ ಕುರಿತ ಚರ್ಚೆಯಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ್ದ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದ್ದರೂ, ಸಂಸ್ಥೆ ಪೋಲೀಸರ ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೇಶವಿರೋಧಿ ಘೋಷಣೆ ಕೂಗಿರುವ ವಿಡಿಯೋ ನ್ನು ನೀಡುವಂತೆ ತನಿಖಾಧಿಕಾರಿಗಳು ಮೂರೂ ದಿನಗಳ ಹಿಂದೆಯೇ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆಗೆ ನೋಟಿಸ್ ನೀಡಿದ್ದರಾದರೂ, ಈ ವರೆಗೂ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತೇವೆ ಎಂದು ಪತ್ರಿಕಾಪ್ರಕಟಣೆಯಲ್ಲಿ ತಿಳಿಸಿತ್ತಾದರೂ, ಈಗ ಅಮ್ನೆಸ್ಟಿ ಇಂಟರ್ ನ್ಯಾಷನಲ್ ವಿರುದ್ಧ ತನಿಖೆಗೆ ಅಸಹಕಾರ ನೀಡುತ್ತಿರುವ ಆರೋಪ ಕೇಳಿಬಂದಿದೆ.
Advertisement