ಕಾನೂನು ಉಲ್ಲಂಘನೆ ಆರೋಪ: ಸಿದ್ದರಾಮಯ್ಯ, ಸದಾನಂದಗೌಡ ನಿರಾಳ

ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ 8 ನಾಯಕರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಅರ್ಜಿಯನ್ನು ಹೈಕೋರ್ಟ್...
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ 8 ನಾಯಕರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಅರ್ಜಿಯನ್ನು ಹೈಕೋರ್ಟ್ ಶನಿವಾರ ತಿರಸ್ಕರಿಸಿದೆ.

ಜನಪ್ರತಿನಿಧಿಗಳಾಗಿದ್ದುಕೊಂಡು ಬಾರ್ ಕೌನ್ಸಿಲ್ ನಿಂದ ಹಲವು ಸವಲತ್ತುಗಳನ್ನು ಪಡೆಯುತ್ತಿದ್ದಾರೆಂದು ಆರೋಪಿಸಿ ಭಾರತೀಯ ಭ್ರಷ್ಟಾಚಾರ ನಿಗ್ರಹ ಮಂಡಳಿ ಟ್ರಸ್ಟ್ ಅಧ್ಯಕ್ಷ ಹುಸೇನ್ ಮೊಯೀನ್ ಫಾರೂಕ್ ಹಾಗೂ ಸದಸ್ಯ ರುದ್ರಪ್ಪ ಅವರು ಹೈ ಕೋರ್ಟ್ ನಲ್ಲಿ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ನಿನ್ನೆ ಪರಿಶೀಲನೆ ನಡೆಸಿರುವ ನ್ಯಾಯಮೂರ್ತಿ ಆನಂದ್ ಬೈರಾರೆಡ್ಡಿ ನೇತೃತ್ವದ ಏಕಸದಸ್ಯ ಪೀಠ, ಅರ್ಜಿಯನ್ನು ತಿರಸ್ಕರಿಸಿದ್ದು, ಕಾನೂನು ಉಲ್ಲಂಘನೆ ಮಾಡಿ ಬಾರ್ ಕೌನ್ಸಿಲ್ ನಿಂದ ಹಲವು ಸವಲತ್ತು ಪಡೆಯುತ್ತಾರೆಂದು ಹೇಳಲಾಗಿದೆ. ಆದರೆ, ಈಗಲೂ ಲಾಭ ಅನುಭವಿಸುತ್ತಿದ್ದಾರೆಂಬುದಕ್ಕೆ ಸೂಕ್ತ ರೀತಿಯ ದಾಖಲೆಗಳಿಲ್ಲ. ಹೀಗಾಗಿ ಅರ್ಜಿಯನ್ನು ತಿರಸ್ಕರಿಲಾಗುತ್ತಿದೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com