ಬೆಳೆ ನಾಶ: ಮತ್ತೆ ಆರಂಭವಾಯಿತು ನೊಂದ ರೈತರ ಆತ್ಮಹತ್ಯೆ ಪರ್ವ

ಬೆಳೆ ವಿಫಲವಾದ ಹಿನ್ನೆಲೆಯಲ್ಲಿ ಜಿಲ್ಲೆಯ ದೇವನೂರು ಪ್ರದೇಶದ ರೈತರು ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ಬೆಳೆ ವಿಫಲವಾದ ಹಿನ್ನೆಲೆಯಲ್ಲಿ ಜಿಲ್ಲೆಯ ದೇವನೂರು ಪ್ರದೇಶದ ರೈತರು ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ.

ಕೆಲ ದಿನಗಳ ಹಿಂದೆ ಭೂತಯ್ಯ ಎಂಬ ರೈತ ಬೆಳೆಗಾಗಿ ಮಾಡಿದ ಸಾಲ ತೀರಿಸಲು ಸಾದ್ಯವಾಗದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು.

 ಬೆಳೆ ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡ ತನ್ನ ತಂದೆಯ ಸಾವಿಗೆ ಸರ್ಕಾರ ಯಾವುದೇ ಪರಿಹಾರ ನೀಡಲಿಲ್ಲ ಎಂದು ಬೇಸರಗೊಂಡ ಆತನ ಮಗ ಲಕ್ಷ್ಮೀಶ ಶಾಸಕ ಸಿ.ಟಿ ರವಿ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸೋಮವಾರ ಮಾಚಗೊಂಡನಹಳ್ಳಿಯ ಮತ್ತೊಬ್ಬ ರೈತ ಬೆಳೆ ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಕಡೂರು ತಾಲೂಕಿನಲ್ಲಿರುವ ದೇವನೂರು  ಚಿಕ್ಕಮಗಳೂರು ವಿಧಾನ ಸಭೆ ವ್ಯಾಪ್ತಿಗೆ ಬರುತ್ತದೆ. ಮಳೆಯಿಲ್ಲದ ಕಾರಣ ಹಲವು ಬೆಳೆಗಳು ನಾಶವಾಗಿವೆ. ಜಿಲ್ಲೆಯಲ್ಲಿ ಬರ ತಾಂಡವವಾಡುತ್ತಿದೆ. ಜಿಲ್ಲೆಯ ಯುವಕರು ನಿರುದ್ಯೋಗ ಸಮಸ್ಯೆಯಿಂದ ವಲಸೆ ಹೋಗುವುದನ್ನು ತಪ್ಪಿಸಲು ಜವಳಿ ಪಾರ್ಕ್ ಆರಂಭಿಸುವುದಾಗಿ ಸಚಿವರು ಭರವಸೆ ನೀಡಿದ್ದರು. ಆದರೆ ಅದು ಇನ್ನೂ ಕಾರ್ಯಗತವಾಗಿಲ್ಲ.

ಕಳೆದ8 ವರ್ಷಗಳಿಂದ ಈ ಭಾಗದ ಜನರ ನೀರಿನ ಬವಣೆ ನೀಗಿಸಲು ಆರಂಭಗೊಂಡ ಕರಗಡ ನೀರಾವರಿ ಯೋಜನೆ ಕಳೆದ 8 ವರ್ಷಗಳಿಂದ ಕುಂಟುತ್ತಾ ಸಾಗಿದೆ. ಇತ್ತೀಚೆಗೆ ಸಚಿವ ಪರಮೇಶ್ವರ್ ಹಾಗೂ ಶಿವರಾಜ ತಂಗಡಗಿ ಈ ಪ್ರದೇಶಕ್ಕೆ ಭೇಟಿ  ನೀಡಿ ಶೀಘ್ರವೇ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ. ಜೊತೆಗೆ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸುವಂತೆ ಕಂಟ್ರಾಕ್ಟರ್ ಗೆ ಎಚ್ಚರಿಕೆ ನೀಡಿದ್ದಾರೆ.

ನೀರು ಇಲ್ಲದೇ ಮಳೆಯೂ ಇಲ್ಲದೇ ರೈತರು ಹತಾಶರಾಗಿ ತಮ್ಮ ಅಡಿಕೆ ಹಾಗೂ ತೆಂಗಿನ ಮರಗಳನ್ನು ಕತ್ತರಿಸುತ್ತಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೇ ಮುಂದಿನ ದಿನಗಳಲ್ಲಿ ಮತ್ತಷ್ಟು ರೈತರು ತಮ್ಮ ಪ್ರಾಣ ಕಳೆದು ಕೊಳ್ಳಲಿದ್ದಾರೆ ಎಂದು ಹೋರಾಟ ಸಮಿತಿ ಮುಖಂಡರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com