ಮಾಜಿ ಮುಖ್ಯಮಂತ್ರಿ, ಸಂಸದ ಬಿ.ಎಸ್.ಯಡಿಯೂರಪ್ಪ
ರಾಜ್ಯ
ಅಮ್ನೆಸ್ಟಿ ವಿರುದ್ಧ ಕ್ರಮಕ್ಕೆ ಯಡಿಯೂರಪ್ಪ ಒತ್ತಾಯ
ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದವರನ್ನ ಕೂಡಲೇ ಬಂಧಿಸಿ,ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಘಟನೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು...
ಬೆಂಗಳೂರು: ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದವರನ್ನ ಕೂಡಲೇ ಬಂಧಿಸಿ, ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಘಟನೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬುಧವಾರ ಬಿಜೆಪಿ ಸರ್ಕಾರವನ್ನು ಆಗ್ರಹಿಸಿದೆ.
ನಗರದ ಟೌನ್ ಹಾಲ್ ಬಳಿ ಬಿಜೆಪಿಯ ಪ್ರತಿಭಟನೆ ನೇತೃತ್ವ ವಹಿಸಿದ ಮಾಜಿ ಮುಖ್ಯಮಂತ್ರಿ, ಸಂಸದ ಬಿ.ಎಸ್.ಯಡಿಯೂರಪ್ಪ, ದೇಶದ್ರೋಹದ ಕೆಲಸ ಮಾಡುತ್ತಿರುವವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ನಮ್ಮ ದೇಶದ ಭದ್ರತೆ, ರಕ್ಷಣೆಗೆ ಅಪಾಯವಿದೆ. ನಮ್ಮ ದೇಶ ಕಾಯುವ, ಗಡಿಯ ಭದ್ರತೆಯಲ್ಲಿ ತೊಡಗಿರುವ ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದ ಅಮ್ನೆಸ್ಟಿ ಸಂಘಟನೆ ವಿರುದ್ಧ ಕೇಸು ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ