ಶಾಲೆಯಲ್ಲಿಯೇ ಮಗುವಿಗೆ ಜನ್ಮ ನೀಡಿದ 14 ವರ್ಷದ ಬಾಲೆ

5ನೇ ತರಗತಿ ಓದುತ್ತಿದ್ದ 14 ವರ್ಷದ ಬಾಲಕಿಯೊಬ್ಬಳು ಶಾಲೆಯಲ್ಲಿಯೇ ಹೆಣ್ಣು ಮಗುವೊಂದಕ್ಕೆ ಜನ್ಮ ನೀಡಿರುವ ಘಟನೆಯೊಂದು ಶುಕ್ರವಾರ ನಡೆದಿದ್ದು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಲೆ ಮಹದೇಶ್ವರ ಬೆಟ್ಟ: 5ನೇ ತರಗತಿ ಓದುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಶಾಲೆಯಲ್ಲಿಯೇ ಹೆಣ್ಣು ಮಗುವೊಂದಕ್ಕೆ ಜನ್ಮ ನೀಡಿರುವ ಘಟನೆಯೊಂದು ಶುಕ್ರವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬುಡಕಟ್ಟು ಜನಾಂಗವೊಂದಕ್ಕೆ ಸೇರಿರುವ ಈ ಬಾಲಕಿ ಮಲೆ ಮಹದೇಶ್ವರ ಬೆಟ್ಟದ ಶಾಲೆಯೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಶುಕ್ರವಾರ ಬೆಳಿಗ್ಗೆ ಶಾಲೆಗೆ ಬಂದಿದ್ದ ಬಾಲಕಿ ಹೆರಿಗೆ ನೋವಿನಿಂದ ಬಳಲುತ್ತಿದ್ದಳು. ಈ ವೇಳೆ ಆಕೆಯ ಗೆಳತಿಯೊಬ್ಬಳು ಶಾಲೆಯ ಮುಖ್ಯೋಧ್ಯಾಯರಿಗೆ ಮಾಹಿತಿ ನೀಡಿದ್ದಾಳೆ. ಇದರಂತೆ ಶಿಕ್ಷಕಿ ಹಾಗೂ ಶಾಲೆಯಲ್ಲಿ ಅಡುಗೆ ಮಾಡುವ ಮಹಿಳೆಯನ್ನು ಕಳುಹಿಸಿಕೊಟ್ಟಿದ್ದಾರೆ. ಬಾಲಕಿ ಗರ್ಭಿಣಿಯಾಗಿರುವ ವಿಚಾರ ಯಾರಿಗೂ ತಿಳಿದಿರಲಿಲ್ಲ.

ತೀವ್ರವಾಗಿ ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯನ್ನು ಶಿಕ್ಷಕಿ ಹಾಗೂ ಅಡುಗೆ ಮಾಡುವ ಮಹಿಳೆ ಶೌಚಾಲಯಕ್ಕೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಬಾಲಕಿಗೆ ಹೆಣ್ಣುಮಗುವಾಗಿದೆ. ಘಟನೆ ಕುರಿತಂತೆ ಶಾಲಾ ಸಿಬ್ಬಂದಿಗಳು ಶಿಕ್ಷಣ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಈ ಹಿಂದೆಯೇ ಶಾಲೆಯನ್ನು ತೊರೆದಿದ್ದ 14 ವರ್ಷದ ರೂಪಾ (ಹೆಸರು ಬದಲಿಸಲಾಗಿದೆ) ಎಂಬ ಬಾಲಕಿ ಮತ್ತೆ 2016ರ ಜೂ.16 ರಂದು ಮಲೆ ಮಹದೇಶ್ವರ ಬೆಟ್ಟದ ಗದಗನಾನೆ ಎಂಬ ಶಾಲೆಗೆ ದಾಖಲಾಗಿದ್ದಾಳೆ. ಕಳೆದ ಎರಡು ತಿಂಗಳಿನಿಂದ ಆಕೆ ಹಾಸ್ಟೆಲ್ ವೊಂದರಲ್ಲಿ ಉಳಿದುಕೊಂಡಿದ್ದು, ಆಕೆ ಗರ್ಭಿಣಿ ಎಂಬ ವಿಚಾರ ಯಾರ ಗಮನಕ್ಕೂ ಬಂದಿಲ್ಲ.

ಬಾಲಕಿ ಗರ್ಭಿಣಿಯಾಗಿದ್ದ ವಿಚಾರ ನಮಗೆ ತಿಳಿದಿತ್ತು. ಎಲ್ಲಿ ಆಕೆಯನ್ನು ಶಾಲೆಗೆ ಸೇರಿಸಿಕೊಳ್ಳುವುದಿಲ್ಲವೋ ಎಂಬ ಭಯದಿಂದ ವಿಚಾರವನ್ನು ಯಾರಿಗೂ ಹೇಳಿರಲಿಲ್ಲ ಎಂದು ವಿಚಾರಣೆ ವೇಳೆ ಬಾಲಕಿಯ ಪೋಷಕರು ಹೇಳಿಕೊಂಡಿದ್ದಾರೆ.

ನನ್ನ ಮಗಳು ರೂಪಾ ಸೋದರಮಾವ ಶಿವು ಎಂಬುವವನೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದಳು. ಮಗುವನ್ನು ತೆಗೆಸುವುದಾಗಿ ನಿರ್ಧಾರ ಕೈಗೊಂಡಿದ್ದೆ. ಆದರೆ, ನನ್ನ ಮಗಳಿಗೆ ಮಗುವನ್ನು ತೆಗೆಸುವುದು ಇಷ್ಟವಿರಲಿಲ್ಲ. ಆಕೆ ವಿರೋಧ ವ್ಯಕ್ತಪಡಿಸುತ್ತಿದ್ದಳು ಎಂದು ಬಾಲಕಿಯ ತಾಯಿ ಹೇಳಿಕೊಂಡಿದ್ದಾರೆ.

ಇನ್ನು ಘಟನೆ ಕುರಿತಂತೆ ಶಾಲಾ ಮುಖ್ಯೋಪಾಧ್ಯಾಯರು ಮಾತನಾಡಿದ್ದು, ಘಟನೆಯನ್ನು ಉನ್ನತಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಈಗಾಗಲೇ ಶಾಲಾ ಸಿಬ್ಬಂದಿಗಳ ಹೇಳಿಕೆಯನ್ನು ಅಧಿಕಾರಿಗಳು ದಾಖಲು ಮಾಡಿಕೊಂಡಿದ್ದಾರೆಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com