ಭಾರತ್ ಬಂದ್ ಹಿನ್ನೆಲೆ: ಬೆಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ

ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2 ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಬೆಂಗಳೂರು ವಿಶ್ವವಿದ್ಯಾನಿಲಯ
ಬೆಂಗಳೂರು ವಿಶ್ವವಿದ್ಯಾನಿಲಯ
Updated on

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟಗಳು ಇದೇ ಸೆಪ್ಟೆಂಬರ್ 2, ಶುಕ್ರವಾರಂದ ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2 ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಎರಡನೇ ವರ್ಷದ ಬಿಎ, ಬಿಕಾಂ, ಬಿಬಿಎಂ ಕೋರ್ಸ್ ಗಳಿಗೆ ಸೆಪ್ಟೆಂಬರ್ ರಂದು ಪರೀಕ್ಷೆ ನಡೆಯಬೇಕಿತ್ತು. ಆದರೆ ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಪರೀಕ್ಷೆಯ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ ಎಂದು ವಿಶ್ವವಿದ್ಯಾನಿಲಯದ ರಿಜಿಸ್ಟಾರ್ ಕಚೇರಿ ತಿಳಿಸಿದೆ.

ಸೆ.2 ರಂದು ನಡೆಯಬೇಕಿದ್ದ ಬಿಎ ಹಾಗು ಬಿಕಾಂ ಎರಡನೇ ವರ್ಷದ ಪರೀಕ್ಷೆಯನ್ನು  ಸೆ.6 ಕ್ಕೆ, ಬಿಬಿಎಂ ಎರಡನೇ ವರ್ಷದ ಪರೀಕ್ಷೆಯನ್ನು ಸೆ.7 ಕ್ಕೆ ನಿಗದಿಪಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com